ಗುರುವಾರ , ಏಪ್ರಿಲ್ 9, 2020
19 °C

‘ಎಲ್ಲಾ ಸಾಹಿತ್ಯಗಳ ತಾಯಿ ಜಾನಪದ ಸಾಹಿತ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಾನಪದ ಸಾಹಿತ್ಯ, ಗ್ರಾಮೀಣ ಪ್ರದೇಶದ ಜನರ ಬದುಕಿನ ಜೀವನಾಡಿ. ಗುರು–ಹಿರಿಯರು, ಹೆತ್ತವರಿಗೆ ಗೌರವ ಕೊಡುವುದನ್ನು ಕಲಿಸುತ್ತದೆ ಹಾಗೂ ಎಲ್ಲಾ ಸಾಹಿತ್ಯಗಳ ತಾಯಿ ಬೇರು ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ ಅಭಿಪ್ರಾಯಪಟ್ಟರು.

ನಗದ ಜಸ್ಟಿಸ್ ಶಿವರಾಜ್ ಪಾಟೀಲ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಕನ್ನಡ ಜಾನಪದ ಪರಿಷತ್ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಕನ್ನಡ ಜಾನಪದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಟಿ.ವಿ ಧಾರಾವಾಹಿಗಳಲ್ಲಿ ಒಂದು ಹೆಣ್ಣಿನ ಬೆಳವಣಿಗೆಯನ್ನು ಮತ್ತೊಂದು ಹೆಣ್ಣು ಸಹಿಸುವುದಿಲ್ಲ ಎನ್ನುವ ರೀತಿಯಲ್ಲಿ ಮಹಿಳೆಯರನ್ನು ತೋರಿಸುತ್ತಿದ್ದು ಸರಿಯಲ್ಲ. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ಹಿಮ ಬಿಂದು ಮಾತನಾಡಿ, ಕನ್ನಡ ಜಾನಪದ ಪರಿಷತ್ತು ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು ಶ್ಲಾಘನೀಯ. ನಮ್ಮ ಹಿರಿಯರ ಆಚಾರ ವಿಚಾರಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ವಿದ್ಯಾರ್ಥಿಗಳೂ ಜಾನಪದ ಸಾಹಿತ್ಯವನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.

ಸಾಹಿತಿ ಮುರಳಿಧರ ಕುಲಕರ್ಣಿ ಮಾತನಾಡಿದರು. ಮಧೂರ ಪ್ರಾರ್ಥಿಸಿದರು. ಉಪನ್ಯಾಸಕ ಅವಿನಾಶ ಪಾಟೀಲ್ ಸ್ವಾಗತಿಸಿದರು. ವಿದ್ಯಾರ್ಥಿನಿ ಮೈತ್ರಾ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು