ರಾಯಚೂರು: ನಗರದ ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆರಂಭವಾದ 'ಜನತಾ ದರ್ಶನ' ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಉದ್ಘಾಟಿಸಿದರು.
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ದೇವದುರ್ಗ ಶಾಸಕಿ ಕರೆಮ್ಮ ನಾಯಕ, ಹಂಪನಗೌಡ ಬಾದರ್ಲಿ, ಸಣ್ಣೆಗೌಡ, ಬಸವರಾಜ ಪಾಟೀಲ ಇಟಗಿ, ಪ್ರಭಾರ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಇದ್ದರು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು 22 ಕೌಂಟರ್ ತೆರೆಯಲಾಗಿದೆ. ಎರಡು ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.