ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಹೇಳಿಕೆಗೆ ಜನವಾದಿ ಮಹಿಳಾ‌ ಸಂಘಟನೆ ಖಂಡನೆ

Published 14 ಏಪ್ರಿಲ್ 2024, 16:05 IST
Last Updated 14 ಏಪ್ರಿಲ್ 2024, 16:05 IST
ಅಕ್ಷರ ಗಾತ್ರ

ಜಾಲಹಳ್ಳಿ: ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವುದು ಖಂಡನೀಯ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ಖಂಡಿಸಿದ್ದಾರೆ.

ಭಾನುವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮಾತನಾಡುವ ಭರಾಟೆಯಲ್ಲಿ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಯಿಂದ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ನಾಲಿಗೆಯನ್ನು ಹರಿಬಿಟ್ಟು ತಮ್ಮ ವ್ಯಕ್ತಿತ್ವವನ್ನು ತೋರಿಸಿಕೊಂಡಿದ್ದಾರೆ. ಒಬ್ಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯಾದ ಅವರಿಗೆ ಮಹಿಳೆಯರ ಕುರಿತು ಕನಿಷ್ಠ ಗೌರವ ಇಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು

ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದಷ್ಟೇ ಅಲ್ಲ. ಅವರ ಮನಸ್ಥಿತಿ ಯಾವ ರೀತಿ ಇದೆ ಎನ್ನುವುದನ್ನು ರಾಜ್ಯದ ಜನರಿಗೆ ತೋರಿಸಿದ್ದಾರೆ. ತಕ್ಷಣವೇ ಕುಮಾರಸ್ವಾಮಿ ಅವರು ರಾಜ್ಯದ ಮಹಿಳೆಯರಲ್ಲಿ ಬೇಷರತ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಈಗ ಭೀಕರ ಬರಗಾಲವಿದೆ. ಕೋವಿಡ್ ಹೊಡೆತದಿಂದ ಇನ್ನೂ ಜನ ಹೊರಬಂದಿಲ್ಲ. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಬದುಕಿಗೆ ಅಲ್ಪ ಸ್ವಲ್ಪ ಆಸರೆಯಾಗಿದೆ ಎಂಬ ಕನಿಷ್ಠ ಪ್ರಜ್ಞೆಯೂ ಅವರಿಗೆ ಇಲ್ಲವಾಗಿದೆ. ರಾಜ್ಯದ ಮಹಿಳೆಯರು ಮತ ಹಾಕುವ ಮುನ್ನ ಯೋಚಿಸಬೇಕು. ಮಹಿಳೆಯರ ಕುರಿತು ಇಷ್ಟು ಲಘು ಧೋರಣೆ ಹೊಂದಿರುವ ಪಕ್ಷಕ್ಕೆ ಬೆಂಬಲಿಸುವ ಮಹಿಳೆಯರು ಯಾವುದೇ ಕಾಣಕ್ಕೂ ಅವರಿಗೆ ಮತ ನೀಡದೇ ಪಾಠ ಕಲಿಸಬೇಕು. ಮಹಿಳೆಯರ ಬಗ್ಗೆ ಕೀಳು ಮನೋಭಾವ ಸೂಚಿಸುವ ಮಾತುಗಳನ್ನು ನುಡಿದ ಕುಮಾರಸ್ವಾಮಿ ಅವರ ಜಾತ್ಯಾತೀತ ಜನತಾದಳ ಪಕ್ಷಕ್ಕೆ ಮತ್ತು ಅವರು ಬೆಂಬಲಿಸುವ ಭಾರತೀಯ ಜನತಾ ಪಕ್ಷಕ್ಕೆ ಯಾವುದೇ ಕಾರಣಕ್ಕೆ ಮತ ಹಾಕಬಾರದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಶೇಖಮ್ಮ ದೇಸಾಯಿ, ರಜೀಯಾ ಬೇಗಂ ಪಾರಶಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT