ಶನಿವಾರ ಈ ಕುರಿತು ಮಾತನಾಡಿರುವ ಅವರು, ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಅಳವಡಿಸಲು ತಜ್ಞರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಪರವಾಗಿ ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಅವಿರತ ಶ್ರಮಿಸುತ್ತಿದ್ದಾರೆ. ಬಚಾವತ್ ಆಯೋಗದ ವರದಿಯನ್ವಯ ಎಡ-ಬಲದಂಡೆ ಕಾಲುವೆ, ನದಿಗೆ ನೀರು ನಿಗದಿಗೊಳಿಸಲಾಗಿದೆ. ತುಂಗಭದ್ರಾ ಬೋರ್ಡ್ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತದೆ. ಜಲಾಶಯದ 33 ಗೇಟ್‍ಗಳ ನಿರ್ವಹಣೆ, ದುರಸ್ತಿ, ನೀರಿನ ಸಂಗ್ರಹದ ಲೆಕ್ಕಾಚಾರ ನಿರ್ಧಾರ ಸಂಪೂರ್ಣ ಬೋರ್ಡ್‍ನ ವ್ಯಾಪ್ತಿಗೆ ಒಳಪಡುತ್ತದೆ. ಈ ಬಗ್ಗೆ ಗೊತ್ತಿದ್ದರೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ ಒಮ್ಮೆ ಮಾತ್ರ ಜಲಾಶಯಕ್ಕೆ ಭೇಟಿ ನೀಡಿ, ಗೊಂದಲದ ಹೇಳಿಕೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ’ ಎಂದು ಆಪಾದಿಸಿದರು.