ಗುರುವಾರ , ಆಗಸ್ಟ್ 5, 2021
26 °C

ಶಾಸಕರ ಸಹೋದರನಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ಸ್ಥಳೀಯ ಶಾಸಕ ವೆಂಕಟರಾವ್ ನಾಡಗೌಡ ಅವರ ಸಹೋದರ ಹಾಗೂ ಜೆಡಿಎಸ್ ಪಕ್ಷದ ವಕ್ತಾರ ಬಸವರಾಜ ನಾಡಗೌಡ ಅವರಿಗೂ ಕೋವಿಡ್‌ ಸೋಂಕು ದೃಢಪಟ್ಟಿದೆ.

ಕಳೆದ 10 ದಿನಗಳಿಂದ ತಮ್ಮ ಸಂಪರ್ಕದಲ್ಲಿ ಇದ್ದವರೆಲ್ಲರೂ ಸ್ವಯಂ ಪ್ರೇರಿತರಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆದು ಹೋಂ ಕ್ವಾರೆಂಟೈನ್ ಆಗಬೇಕೆಂದು ಅವರು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಶಾಸಕ ನಾಡಗೌಡ ಹೋಂ ಕ್ವಾರೆಂಟೈನ್: ‘ನನ್ನ ಸಹೋದರ ಬಸವರಾಜ ನಾಡಗೌಡ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಾನು ಸ್ವಯಂ ಪ್ರೇರಿತವಾಗಿ ಹೋಂ ಕ್ವಾರೆಂಟೈನ್ ಆಗುತ್ತಿದ್ದೇನೆ. 10 ದಿನಗಳವರೆಗೆ ಯಾವುದೇ ರೀತಿಯ ಕ್ಷೇತ್ರ ಸಮಸ್ಯೆಗಳು ಇದ್ದಲ್ಲಿ ನನಗೆ ನೇರವಾಗಿ ಭೇಟಿಯಾಗಲು ಅವಕಾಶವಿಲ್ಲ. ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ. ಜನರು ಸಹ ಅನಾವಶ್ಯಕವಾಗಿ ತಿರುಗಾಡುವುದನ್ನು ನಿಲ್ಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕು’ ಎಂದು ಶಾಸಕ ವೆಂಕಟರಾವ್ ನಾಡಗೌಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು