ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಬಂಧನಕ್ಕೆ ಒತ್ತಾಯ

Last Updated 13 ಆಗಸ್ಟ್ 2020, 16:26 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಮಾನ್ವಿ ವರದಿಗಾರ ಶರಣಬಸವ ನೀರಮಾನ್ವಿ ಮೇಲೆ ಜನಶಕ್ತಿ ಕೇಂದ್ರದ ರಾಜ್ಯ ಘಟಕದ ಅಧ್ಯಕ್ಷ ಪ್ರಭುರಾಜ ಕೊಡ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ಗೂಂಡಾವರ್ತನೆ ತೋರಿದ್ದು, ಕೂಡಲೇ ಆತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಘಟಕ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ಪತ್ರಕರ್ತ ಸಂಘದ ಬಗ್ಗೆ ಹಲವು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದು, ಸಂಘದ ಚಟುವಟಿಕೆಗಳಿಗೆ ಅಡ್ಡಿಪಡಿಸಲಾಗುತ್ತಿದೆ. ಕೂಡಲೇ ಆತನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕೋರಿದರು.

ಬೆಂಗಳೂರಿನ ಡಿಜಿ ಹಳ್ಳಿ ಗಲಭೆ ಘಟನೆಯಲ್ಲಿ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೂಡಲೇ ಬಂಧಿಸಬೇಕು. ಕಲಬುರ್ಗಿಯ ಆರ್‌ಟಿಐ ಕಾರ್ಯಕರ್ತ ಸಿದ್ದು ಹಿರೇಮಠ, ಪತ್ರಕರ್ತರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದು, ಆತನ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ನಾಗಡದಿನ್ನಿ, ಪ್ರಧಾನ ಕಾರ್ಯದರ್ಶಿ ಆರ್.ಗುರುನಾಥ, ಹಿರಿಯ ವರದಿಗಾರರಾದ ವೆಂಕಟಸಿಂಗ್, ದತ್ತು ಸರ್ಕಿಲ್, ಶಿವಮೂರ್ತಿ ಹಿರೇಮಠ ಸೇರಿದಂತೆ ಎಲ್ಲ ವರದಿಗಾರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT