ಕಕ್ಕೇರಾ: ಪಟ್ಟಣದ ಕೆನರಾ ಬ್ಯಾಂಕ್ ಬಳಿ ಕೃಷಿ ಇಲಾಖೆ 2025-26ನೇ ಸಾಲಿನ ಆರ್.ಐ.ಡಿ.ಎಫ್ ಟ್ರಾಂಚ್-31 ಯೋಜನೆ ಅಡಿಯಲ್ಲಿ ಮಂಜೂರಾದ ನೂತನ ರೈತ ಸಂಪರ್ಕ ಕೇಂದ್ರ ಹಾಗೂ ಗೋದಾಮು ನಿರ್ಮಾಣ ಕಾಮಗಾರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಇಲ್ಲಿಯ ರೈತ ಸಂಪರ್ಕ ಕೇಂದ್ರಕ್ಕೆ ಸ್ವಂತ ಕಟ್ಟಡ ಹಾಗೂ ಗೋದಾಮು ಇಲ್ಲದೇ ಹಲವಾರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ರೈತ ಸಂಪರ್ಕ ಕೇಂದ್ರ ನಡೆಸಲಾಗುತ್ತಿತ್ತು. ಅದನ್ನು ಹೋಗಲಾಡಿಸಲು ಸರ್ಕಾರ ಶಾಶ್ವತವಾಗಿ ರೈತ ಸಂಪರ್ಕ ಕೇಂದ್ರ ಹಾಗೂ ಗೋದಾಮು ನಿರ್ಮಾಣಕ್ಕೆ ಮುಂದಾಗಿದೆ’ ಎಂದರು.

ನಂದಣ್ಣಪ್ಪ ಪೂಜಾರಿ ಅವರು ಭೂಮಿಗೆ ಪೂಜೆ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಮಲ್ಲಣ್ಣ ಸಾಹುಕಾರ್, ಶರಣು ಸಾಹುಕಾರ್ ದಂಡಿನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಕೆಪಿಸಿಸಿ ಸದಸ್ಯ ಗುಂಡಪ್ಪ ಸೊಲಾಪೂರ, ಪುರಸಭೆ ಅಧ್ಯಕ್ಷ ಪರಮಣ್ಣ ಕಮತಗಿ, ಉಪಾಧ್ಯಕ್ಷ ಜಟ್ಟೆಪ್ಪ ದಳಾರ, ಮುಖಂಡರಾದ ದ್ಯಾವಪ್ಪ ಜಂಪಾ, ಲಕ್ಷ್ಮಣ ಲಿಂಗದಳ್ಳಿ, ಶರಣಕುಮಾರ ಸೋಲಾಪುರ, ಬಸಯ್ಯ ಸ್ವಾಮಿ, ನಂದಣ್ಣ ವಾರಿ, ಮಲ್ಲಣ್ಣ ಹೆಗ್ಗನದೊಡ್ಡಿ, ಗ್ವಾಲಪ್ಪ ಮಲಕೋಜಿ, ಗೋಪಾಲ ದೊರೆ ಅರಕೇರಿ, ರಾಮಣ್ಣಗೌಡ, ಅಮರಪ್ಪ ಮಂಡಿ, ಮುದ್ದಣ್ಣ ಅಮ್ಮಾಪೂರ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ತೇಲಂಗ್ ಸೇರಿದಂತೆ ಪುರಸಭೆ ಸದಸ್ಯರುಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಸೇರಿದಂತೆ ಅನೇಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-30-1860989356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.