ಕಕ್ಕೇರಾ: ಕಳೆದ 15 ದಿನಗಳಿಂದ ವಿವಿಧ ವಾರ್ಡ್ಗಳ ರಸ್ತೆಗಳಲ್ಲಿ ಕಸ ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿದೆ. ಇದು ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದ್ದು, ಇದರಲ್ಲಿ ಪುರಸಭೆ ಅಧಿಕಾರಿಗಳ ನಿಷ್ಕಾಳಜಿ ಎದ್ದು ಕಾಣುತ್ತಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪುರಸಭೆಯಲ್ಲಿ 2 ಟ್ರ್ಯಾಕ್ಟರ್ ಹಾಗೂ 6 ಮಿನಿ ಟಾಟಾ ಎ.ಸಿ ವಾಹನಗಳಿದೆ. ಆರು ಟಾಟಾ ಎ.ಸಿಗಳು ದುರಸ್ತಿಯಲ್ಲಿವೆ ಎಂದರೆ ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ ಎಂಬುದು ತಿಳಿಯುತ್ತದೆ’ ಎಂದು ಮುಖಂಡ ಪರಮಣ್ಣ ವಡಿಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ಕೂಡಲೇ ಮಿನಿ ಟಾಟಾ ವಾಹನಗಳನ್ನು ದುರಸ್ತಿಗೊಳಿಸಿಬೇಕು. ಬೆಳಗಿನ ಜಾವ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಜೊತೆ ಕೆಲಸ ನಿರ್ವಹಿಸುವ ಸ್ಥಳದಲ್ಲಿ ಅಧಿಕಾರಿಗಳು ಹಾಜರಿರಬೇಕು. ಮುಖ್ಯಾಧಿಕಾರಿಗಳು ಸಹ ಗಮನ ಹರಿಸಬೇಕು’ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-30-381816955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.