ಕಲಬುರಗಿ: ಕೆಪಿಸಿಸಿ ಕಲ್ಯಾಣ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಮಿತಿ ವತಿಯಿಂದ ಕಲ್ಯಾಣ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಮಹಾ ಸಮಾವೇಶವನ್ನು ಜೂನ್ 6ರಂದು ಬೆಳಿಗ್ಗೆ 10.30 ಗಂಟೆಗೆ ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷ ಅತಿಕ್ ಪಟೇಲ್ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ಜಿಲ್ಲೆ, ತಾಲ್ಲೂಕು, ನಗರ ಕೇಂದ್ರಗಳಲ್ಲಿ ಶೆಡ್, ನೀರು, ಶೌಚಾಲಯ, ವಿದ್ಯುತ್, ಕಸದ ತೊಟ್ಟಿ ಸಹಿತ ವೈಜ್ಞಾನಿಕ ಮಾರಾಟ ವಲಯ ನಿರ್ಮಾಣ ಸೇರಿದಂತೆ ಪ್ರಮುಖ 10 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸುವರು. ಈ ಭಾಗದ ಏಳು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿದ್ದವರು, ಶಾಸಕರು ಭಾಗವಹಿಸಲಿದ್ದಾರೆ. ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ಸಮಿತಿಯ ರಾಜ್ಯಾಧ್ಯಕ್ಷ ಈ.ಸಿ. ರಂಗಸ್ವಾಮಿ ಅಧ್ಯಕ್ಷತೆ ವಹಿಸುವರು’ ಎಂದರು.

‘ಏಳು ಜಿಲ್ಲೆಗಳಿಂದ 3 ಸಾವಿರಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದೇ ದಿನ ರಾಯಚೂರು ನಗರದ ಶೆಟ್ಟಿಬಾವಿ ವೃತ್ತದಿಂದ ತೀನ್ ಕಂದಿಲ್ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಬೈಕ್ ರ್ಯಾಲಿ ನಡೆಯಲಿದೆ’ ಎಂದು ಹೇಳಿದರು.

‘ಕಂದಾಯ ವಸೂಲಿ ಟೆಂಡರ್ 10 ವರ್ಷ ಮೇಲ್ಪಟ್ಟ ಅನುಭವಿ ವ್ಯಾಪಾರಸ್ಥರಿಗೆ ಅಥವಾ ಬೀದಿ ಬದಿ ವ್ಯಾಪಾರಿಗಳ ಸಂಘಗಳಿಗೆ ಮಾತ್ರ ನೀಡಬೇಕು. ಆಂಗ್ಲ ಮಾಧ್ಯಮ ಸರ್ಕಾರಿ, ಖಾಸಗಿ ಮತ್ತು ಸಿಬಿಎಸ್ಇ ಶಾಲೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಮಕ್ಕಳಿಗೆ ಎಲ್ಕೆಜಿಯಿಂದ ಎಸ್ಎಸ್ಎಲ್ಸಿವರೆಗೆ ಉಚಿತ ಪ್ರವೇಶ ನೀಡಬೇಕು. 55 ವರ್ಷ ಮೇಲ್ಪಟ್ಟ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ ₹3,000 ಪಿಂಚಣಿ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು. ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಯೇಸುಮಿತ್ರ, ಕಲಬುರಗಿ ಜಿಲ್ಲಾಧ್ಯಕ್ಷ ಎಂ.ಎಂ. ಮನಿಯಾರ್, ಪ್ರಶಾಂತ ಬಾಚನಾಳ, ಉಸ್ಮಾನ್ ಸಿಪಾಯಿ ದುಮದ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-1248379010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.