ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ–ಭೇದಿ ಕಾಣಿಸಿಕೊಂಡ ಪರಿಣಾಮ 40 ಜನ ಅಸ್ವಸ್ಥಗೊಂಡಿದ್ದಾರೆ.

‘ಭೂತಲದಿನ್ನಿ ಆರೋಗ್ಯ ಕೇಂದ್ರದಲ್ಲಿ 27 ಜನ ಚಿಕಿತ್ಸೆ ಪಡೆದಿದ್ದಾರೆ. ಹಾರಾಪುರ ಆರೋಗ್ಯ ಕೇಂದ್ರದಲ್ಲಿ 7 ಜನ, ಸಿಂಧನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಕಲುಷಿತ ನೀರಿನ ಸೇವನೆಯಿಂದ ವಾಂತಿ–ಭೇದಿಯಾಗಿದೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನಾಗರಾಜ ಕಾಟವಾ ತಿಳಿಸಿದ್ದಾರೆ.

‘ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಅನ್ನು 2 ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಟ್ಯಾಂಕ್ನ ಕಬ್ಬಿಣದ ಮೆಟ್ಟಿಲು ತುಕ್ಕು ಹಿಡಿದಿದ್ದು, ಅದರ ತುಣುಕು ನೀರಿನಲ್ಲಿ ಸೇರಿವೆ. ನೀರು ಕುಡಿಯಲು ಯೋಗ್ಯವೇ ಎಂಬುದನ್ನು ಪರೀಕ್ಷಿಸದೇ ಪೂರೈಸಿರುವುದೇ ಘಟನೆಗೆ ಕಾರಣ’ ಎಂದು ಗ್ರಾಮದ ಮುಖಂಡರಾದ ವೆಂಕನಗೌಡ ಪೊಲೀಸ್ ಪಾಟೀಲ ಹಾಗೂ ಖಾಜಾಹುಸೇನ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.