ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಲ್ಯಾಣ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಮಿತಿಯ ವತಿಯಿಂದ ಜೂನ್ 6ರಂದು ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಲ್ಯಾಣ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಮಹಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅತಿಕ್ ಪಟೇಲ್ ತಿಳಿಸಿದರು.

ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಉದ್ಘಾಟಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶಾಸಕರು ಭಾಗವಹಿಸಲಿದ್ದಾರೆ ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ಸಮಿತಿಯ ರಾಜ್ಯಾಧ್ಯಕ್ಷ ಈ.ಸಿ. ರಂಗಸ್ವಾಮಿ ವಹಿಸಲಿದ್ದಾರೆ. ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಜಿಲ್ಲಾ, ತಾಲ್ಲೂಕು ಹಾಗೂ ನಗರ ಕೇಂದ್ರಗಳಲ್ಲಿ ಶೆಡ್ ನಿರ್ಮಾಣ, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಕಸದ ತೊಟ್ಟಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ವೈಜ್ಞಾನಿಕ ವೆಂಡಿಂಗ್ ಜೋನ್ಗಳ ನಿರ್ಮಾಣ ಸೇರಿದಂತೆ 10 ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದರು.

ಸಂಘದ ರಾಯಚೂರು ಜಿಲ್ಲಾ ಅಧ್ಯಕ್ಷ ಯೇಸು ಮಿತ್ರ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಂದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಿಗಳು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದೇ ದಿನ ರಾಯಚೂರು ನಗರದ ಶೆಟ್ಟಿ ಬಾವಿ ವೃತ್ತದಿಂದ ತೀನ್ ಕಂದಿಲ್ ಮಾರ್ಗವಾಗಿ ಮಹಾನಗರ ಪಾಲಿಕೆ ಕೇಂದ್ರ ಬಸ್ ನಿಲ್ದಾಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ವರೆಗೆ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಸಂಘದ ಜಿಲ್ಲಾಧ್ಯಕ್ಷ ಪುಟ್ಟರಾಜ ಹಲಿಗೆ, ಜ್ಞಾನದೇವ ಬಾಜಿ, ವಿಲ್ಸನ್, ಅಮೀನಾ ಬೇಗಂ, ಅನೂಪ್, ಮಹೇಶ್, ಸಿದ್ದಾರ್ಥ, ವೈಷ್ಣವಿ, ಮುಕೀಮ್, ವಿಲಾಸ್ ಹಾಗೂ ಜುನೇದ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-33-499000885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.