ದೇವದುರ್ಗ: ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಮತ್ತು ಭಕ್ತಿಯ ಸಾಮ್ರಾಜ್ಯ ಕಟ್ಟಿದವರು ಕನಕದಾಸರು ಎಂದು ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯದಿಂದ ಕನ್ನಡ ಭಾಷೆಗೆ ರಾಷ್ಟ್ರೀಯ ಸ್ಥಾನಮಾನ ದೊರೆತಿದೆ. ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿವೆ. ಕನಕದಾಸರು, ಬಸವಣ್ಣನವರು ಕನ್ನಡದಲ್ಲೇ ಬರೆದಿದ್ದಾರೆ. ಈ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದರು. ವರ್ಗರಹಿತ ಸಮಾಜವನ್ನು ಕಟ್ಟಲು ಶ್ರಮಿಸಿದವರು ಕನಕದಾಸರು ಎಂದು ವಿವರಿಸಿದರು.

ಹಾಲುಮತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಖಾನಾಪುರ, ಇಒ ಬಸವರಾಜ ಹಟ್ಟಿ, ತಾಲ್ಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಟಿಎಚ್ಒ ಡಾ.ಬನದೇಶ್ವರ, ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.