ಮಂಗಳವಾರ, ಡಿಸೆಂಬರ್ 1, 2020
19 °C

ಡಿಸೆಂಬರ್ 1 ರಿಂದ ಬೆಂಬಲ‌ ಬೆಲೆ ಖರೀದಿ ಕೇಂದ್ರ: ಡಿಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಜ್ಯದ ರೈತರು ಬೆಳೆದಿರುವ ವಿವಿಧ ಕೃಷಿ ಉತ್ಪನ್ನಗಳನ್ನು ಡಿಸೆಂಬರ್ 1 ರಿಂದ ಖರೀದಿ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದರು.

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನವೆಂಬರ್ 30 ರವರೆಗೂ ನೋಂದಣಿ ಪ್ರಕ್ರಿಯೆ ಮುಗಿಸಬೇಕು.‌ ಆನಂತರ ಖರೀದಿ ಕೇಂದ್ರ ತೆರೆಯುವುದಕ್ಕೆ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಭತ್ತ, ಹೆಸರು, ತೊಗರಿ, ಶೇಂಗಾ, ಕೊಬ್ಬರಿ ಗುಂಡ ಖರೀದಿ ಸಲಾಗುವುದು. ಭತ್ತ ಸೇರಿದಂತೆ ಕೆಲವು ಕೃಷಿ ಉತ್ಪನ್ನಗಳ ದರ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಕಳುಹಿಸಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು