ಸೋಮವಾರ, ಮಾರ್ಚ್ 27, 2023
29 °C

ವಿವಿಧೆಡೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕವಿತಾಳ: ಪಟ್ಟಣ ಸೇರಿದಂತೆ ವಿವಿಧೆಡೆ ಸೋಮವಾರ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯೆ ಶಕುಂತಲಾ, ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಆನ್ವರಿ ಕ್ರಾಸ್‌ನಲ್ಲಿ ಕನ್ನಡಾಭಿಮಾನಿಗಳು ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಮುಖಂಡರಾದ ಎಂ.ಡಿ.ಅಲೀಂ, ವೆಂಕಟೇಶ ಮಡಿವಾಳ, ಶಿವಕುಮಾರ ಮಡಿವಾಳ, ಶರಣಬಸವ, ಸಿದ್ದಪ್ಪ, ಮಂಜುನಾಥ, ಅಮರೇಶ, ಅಭಿಷೇಕ ಮತ್ತಿತರರು ಇದ್ದರು.

ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಹಾದೇವ ಹಡಪದ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಶಿಕ್ಷಕ ಆಂಜನೇಯ, ಶಿಕ್ಷಕಿಯರಾದ ಗಂಗಮ್ಮ, ಶೋಭಾ, ಸುಜಾತ ಮತ್ತು ರೇಣುಕಾ ಇದ್ದರು.

ಸಿರವಾರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿ ಗಾಯಂತ್ರಿ, ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಿಕ್ಷಕಿ ಮಲ್ಲಮ್ಮ, ವಿದ್ಯಾರ್ಥಿಗಳು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.