ಮಂಗಳವಾರ, ನವೆಂಬರ್ 24, 2020
22 °C

ಗಾಯಕ ಅಂಬಯ್ಯ ನುಲಿಗೆ ರಾಜ್ಯೋತ್ಸವ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Ambaiya Nuli

ಮಾನ್ವಿ (ರಾಯಚೂರು ಜಿಲ್ಲೆ): ಜಿಲ್ಲೆಯ ಹೆಸರಾಂತ ಗಾಯಕ ಅಂಬಯ್ಯ ನುಲಿ ಅವರು 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ 35 ವರ್ಷಗಳಿಂದ ಮಾಡಿರುವ ಸಾಧನೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರಾದ ಅಂಬಯ್ಯ ಅವರು ಪಂಡಿತ್‌ ನಾರಾಯಣ ಢಗೆ ಅವರಲ್ಲಿ ಹಿಂದುಸ್ತಾನಿ ಸುಗಮ  ಸಂಗೀತಾಭ್ಯಾಸ ಮಾಡಿದ್ದಾರೆ. ಶರಣರ ವಚನಗಳು, ದಾಸರ ಕೀರ್ತನೆಗಳು, ಭಾವಗೀತೆಗಳನ್ನು ಗಾಯನ ಮಾಡಿ ಜನ ಮನ್ನಣೆ ಸಂಪಾದಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿಯಲ್ಲಿದ್ದು ಮಾನ್ವಿ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ. ಇದುವರೆಗೂ 180ಕ್ಕೂ ಹೆಚ್ಚು ಗಾಯನ ಸಿ.ಡಿ. ಬಿಡುಗಡೆ ಆಗಿವೆ. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ನೆರೆಯ ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಲ್ಲಿ ಹಾಗೂ ಬಹರೈನ್‌, ಅಮೆರಿಕದಲ್ಲಿಯೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು