ರಾಯಚೂರು: ಜಿಲ್ಲಾಡಳಿತದಿಂದ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಕೆಎಸ್ಆರ್ಪಿ, ಜಿಲ್ಲಾ ಸಶಸ್ತ್ರಪಡೆ, ನಾಗರಿಕ ಪೊಲೀಸ್, ಮಹಿಳಾ ಪೊಲೀಸ್, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಎನ್ಸಿಸಿ ಕೆಡೆಟ್, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾ ದಳ, ಸೇಂಟ್ ಮೇರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪಥಸಂಚಲನ ನಡೆಸಿದರು.

ಸಚಿವರ ಭಾಷಣದ ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಾಬು ಭಂಡಾರಿಗಲ್, ಶಿವಮೂರ್ತಿ ಹಿರೇಮಠ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಾಗರ, ಚಂದ್ರಶೇಖರ ಪಾಟೀಲ ಮಿರ್ಜಾಪೂರ, ಸಿಂಧನೂರು ತಾಲ್ಲೂಕಿನ ಸುಕಾಲಪೇಟೆ ನಾರಾಯಣಪ್ಪ ಮಾಡಶಿರವಾರ, ಪಲ್ಕಂದೊಡ್ಡಿಯ ಹನುಮರೆಡ್ಡಿ ಬಸವರಾಜಪ್ಪ ಅವರಿಗೆ ಸನ್ಮಾನ ಮಾಡಲಾಯಿತು.

ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ರಾಯಚೂರು ಮಹಾನಗರಪಾಲಿಕೆಯ ಮೇಯರ್ ನರಸಮ್ಮ ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರಾಯಚೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನಕಿಶೋರ ಪಾಟೀಲ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ, ಮಹಾನಗರಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, 2ನೇ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ರಾಯಚೂರು ತಹಸೀಲ್ದಾರ್ ಸುರೇಶ ವರ್ಮಾ ಉಪಸ್ಥಿತರಿದ್ದರು.

ಕೆಇಬಿ ಸರ್ಕಾರಿ ಶಾಲೆಯ ಶಿಕ್ಷಕಿ ಯಶೋದಾ ಹಾಗೂ ಗಾಜಗೇರಪೇಟೆ ಸರ್ಕಾರಿ ಪೌಢ ಶಾಲೆಯ ಶಿಕ್ಷಕಿ ಮಹೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.