ದೇವದುರ್ಗ: ‘ತಾಲ್ಲೂಕಿನ ಬಾಗೂರಿನಲ್ಲಿ ನರೇಗಾ ಯೋಜನೆಯಡಿ ಎಲ್ಲಾ ಕೂಲಿಕಾರರು ಫಾರಂ ನಂ–6 ಸಲ್ಲಿಸುವ ಮೂಲಕ ಕೂಲಿ ಕೆಲಸಕ್ಕೆ ಹಾಜರಾಗಬೇಕು’ ಎಂದು ತಾಲ್ಲೂಕು ಪಂಚಾಯಿತಿ ಐಇಸಿ ಸಂಯೋಜಕ ಅಮರೇಶ ಹೇಳಿದರು.

ತಾಲ್ಲೂಕಿನ ಕರಡಿಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗೂರಿನಲ್ಲಿ ನರೇಗಾ ಯೋಜನೆಯ ಐಇಸಿ ಕಾರ್ಯಕ್ರಮದಡಿ ಸೋಮವಾರ ಹಮ್ಮಿಕೊಂಡಿದ್ದ ರೋಜ್ಗಾರ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲಸದ ಜೊತೆಗೆ ಆರೋಗ್ಯದ ಕುರಿತೂ ಕಾಳಜಿವಹಿಸಬೇಕು. 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಜಾಬ್ ಕಾರ್ಡ್ ಬಳಕೆ ಮಾಡಿಕೊಂಡು ಕೂಲಿ ಕೆಲಸ ಪಡೆಯಲು ಕಡ್ಡಾಯವಾಗಿ ನಮೂನೆ-6 ಸಲ್ಲಿಸಬೇಕು. ಮೇ ಮತ್ತು ಜೂನ್ವರೆಗೆ 60 ದಿನಗಳ ಕೂಲಿ ಕೆಲಸ ಪಡೆಯಬೇಕು’ ಎಂದರು.

ಎನ್ಎಂಎಂಎಸ್ ಹಾಜರಾತಿಯನ್ನು ಎರಡು ಬಾರಿ ಕಡ್ಡಾಯವಾಗಿ ತೆಗೆದು ಕೊಳ್ಳಲು ಸಿಬ್ಬಂದಿಗೆ ತಿಳಿಸಲಾಯಿತು. ನಮೂನೆ-06 ರಲ್ಲಿ ಕೂಲಿ ಕಾರ್ಮಿರಿಂದ ಅರ್ಜಿ ಪಡೆಯಲಾಯಿತು. ಹಾಗೂ ಡಿಇಒ ಅವರಿಗೆ ಸದರಿ ಅರ್ಜಿಗಳಿಗೆ ಅನುಗುಣವಾಗಿ ಕೆಲಸ ನೀಡಲು ತಿಳಿಸಲಾಯಿತು. ತಾಂತ್ರಿಕ ಸಹಾಯಕ ಮಂಜುನಾಥ, ತಾಲ್ಲೂಕು ಐಇಸಿ ಸಂಯೋಜಕ ಅಮರೇಶ, ಬಿಎಫ್ಟಿ ರವಿ, ಮೇಟಿ, ಕೂಲಿ ಕಾರ್ಮಿಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-32-1104897372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.