ಭಾನುವಾರ, ಫೆಬ್ರವರಿ 23, 2020
19 °C

ಬಂದ್‌ ಕರೆ: ಜಿಲ್ಲೆಯಾದ್ಯಂತ ಬಂದೋಬಸ್ತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಸರೋಜಿನಿ ಮಹಿಷಿ ವರದಿ ಜಾರಿ ಮಾಡುವ ಕುರಿತು ಫೆಬ್ರುವರಿ 13 ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 3 ಕೆ.ಎಸ್‌.ಆರ್.ಪಿ , 10 ಡಿಎಅರ್ , 500 ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ನಿಯೋಜನೆ ಮಾಡಲಾಗಿದೆ. ಬಸ್‌ ನಿಲ್ದಾಣ ಮತ್ತು ಬಂದ್ ಸ್ಥಳಗಳಲ್ಲಿ ಕ್ಯಾಮರಾ ಮ್ಯಾನ್‌ಗಳನ್ನು ಮತ್ತು ಸಿ.ಸಿ ಕ್ಯಾಮರಾಗಳ ಅಳವಡಿಸುವುದಲ್ಲದೇ 40 ಪಿಎಸ್ಐ ,20 ಸಿಪಿಐ, 04 ಡಿವೈಎಸ್ಪಿ ಹಾಗೂ ಇಬ್ಬರು ಎಸ್ಪಿಯ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಅಲ್ಲದೇ ಬಂದ್ ಸಮಯದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಕರಣ ನೆಡದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ರಸ್ತೆ ಮೇಲೆ ಟೈರ್ ಗಳನ್ನು ಸುಟ್ಟು ಸಂಚಾರಕ್ಕೆ ಅಡ್ಡಿ ಪಡಿಸುವುದು ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಸಾರ್ವಜನಿಕರು, ಹೋರಾಟಗಾರರು ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಲು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು