ಹಟ್ಟಿ ಚಿನ್ನದ ಗಣಿ: ‘ಆ.6 ರಂದು ಹಟ್ಟಿ ಚಿನ್ನದ ಗಣಿ ಕಂಪನಿ ಧಾರುವಾಲ ಕ್ರೀಡಾಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಲೋಪ ಆಗದಂತೆ, ಶಿಷ್ಟಾಚಾರದಂತೆ ಜಾಗ್ರತೆ ವಹಿಸಿ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಹೇಳಿದರು.

ಹಟ್ಟಿ ಪಟ್ಟಣದ ಗಣಿ ಕಂಪನಿ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

‘ಕಾರ್ಯಕ್ರಮಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ನಿಗಮ, ಸಮಿತಿ, ಪ್ರಾಧಿಕಾರದ ಅಧ್ಯಕ್ಷರು, ಹಿರಿಯ ಮುಖಂಡರು, ಗಣ್ಯರು, ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಶಿಷ್ಟಾಚಾರದಂತೆ ಆಸನದ ವ್ಯವಸ್ಥೆಯಾಗಬೇಕು. ಗೊಂದಲಕ್ಕೆ ಅವಕಾಶವಿಲ್ಲದಂತೆ ಸ್ವಾಗತ ಭಾಷಣ, ಸನ್ಮಾನ, ಸ್ಮರಣಿಕೆ ವಿತರಣೆ, ಸೌಲಭ್ಯಗಳ ವಿತರಣೆ ಎಲ್ಲವೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಕಂಪನಿ ಅಧಿಕಾರಿಗಳು ಮುಂಚಿತವಾಗಿ ಪಟ್ಟಿ ತಯಾರಿಸಿ ಸಿದ್ದತೆ ಮಾಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಸರಿಯಾದ ರೀತಿಯಲ್ಲಿ ಊಟ, ಉಪಾಹಾರ ಸಿದ್ಧತಾ ಕಾರ್ಯವನ್ನು ಈಗಿನಿಂದಲೇ ಆರಂಭಿಸಬೇಕು. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ವ್ಯವಸ್ಥೆಗೆ ಏರ್ಪಾಡು ಮಾಡಬೇಕು. ಬ್ಯಾನರ್ಸ್, ಹೋರ್ಡಿಂಗ್ಸ್, ಬ್ಯಾಡ್ಜ್ ಮುದ್ರಣ ಕಾರ್ಯ ಆಗಬೇಕು. ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ಮಾಧ್ಯಮ ಪ್ರತಿನಿಧಿಗಳಿಗೆ, ಅಧಿಕಾರಿಗಳು, ಸಿಬ್ಬಂದಿ, ಕಂಪನಿಯ ಕಾರ್ಮಿಕರು, ಸ್ವಯಂ ಸೇವಕರು ಹಾಗೂ ಇನ್ನೀತರರಿಗೆ ಪ್ರತ್ಯೇಕವಾಗಿ ಪಾಸ್ಗಳನ್ನು ವಿತರಿಸಿ ಕಾರ್ಯಕ್ರಮದಲ್ಲಿ ಅಚ್ಚುಕಟ್ಟುತನ ಕಾಯ್ದುಕೊಳ್ಳಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಆಹಾರ ಸಿದ್ಧತೆ, ವಿತರಣೆಯಲ್ಲಿ ಯಾವುದೇ ರೀತಿಯ ಲೋಪಗಳು ಆಗದಂತೆ ಆಹಾರ ಪರೀಕ್ಷೆ ಮತ್ತು ಕುಡಿಯುವ ನೀರಿನ ಪರೀಕ್ಷೆಗೆ ಆಹಾರ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಆಂಬುಲೆನ್ಸ್, ಅಗತ್ಯ ಸಂಖ್ಯೆಯಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಇರುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನೋಡಬೇಕು ಎಂದು ತಿಳಿಸಿದರು.

ಜನಸಂದಣಿಯ ನಿಯಂತ್ರಣಕ್ಕೆ ಚಿನ್ನದ ಗಣಿ ಕಂಪನಿಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾರ್ವಜನಿಕರು, ಗಣ್ಯರು, ಜನಪ್ರತಿನಿಧಿಗಳು ಸರಳವಾಗಿ ಬಂದು ಹೋಗಲು ಪ್ರತ್ಯೇಕ ಮಾರ್ಗದ ವ್ಯವಸ್ಥೆಗೆ ಅಗತ್ಯ ಸಂಖ್ಯೆಯಲ್ಲಿ ಬ್ಯಾರಿಕೇಡ್ ಅಳವಡಿಸಲು ಸಿದ್ಧತೆ ಮಾಡಬೇಕು ಎಂದು ಸೂಚನೆ ನೀಡಿದರು.

ಲಿಂಗಸುಗೂರು ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಲಿಂಗಸೂಗೂರು ತಹಶೀಲ್ದಾರ್ ಕೆ.ಸತ್ಯವಂತಿ, ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಕಾ, ಯಮನೂರಪ್ಪ, ಸೈಹಿಪ್ ಹುಲ್ಲಾಖಾನ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಂಪನಿಯ ವಿವಿಧ ವಿಭಾಗದ ಅಧಿಕಾರಿಗಳು ಉಪಸ್ಧಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.