ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ರಿಮ್ಸ್‌ ವೈದ್ಯರೊಂದಿಗೆ ಡಿಸಿಎಂ ಲಕ್ಷ್ಮಣ ಸವದಿ ಸಭೆ

Last Updated 8 ಮೇ 2021, 6:10 IST
ಅಕ್ಷರ ಗಾತ್ರ

ರಾಯಚೂರು: ‘ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ ಸೋಂಕಿತರನ್ನು ಕೇರ್ ಸೆಂಟರ್‌ಗಳಿಗೆ ಇರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ಇದೀಗ ಎಲ್ಲ ವೈದ್ಯರೊಂದಿಗೆ ಸಭೆ ನಡೆಸುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ‌ಸಚಿವ ಲಕ್ಷ್ಮಣ ಸವದಿ ಹೇಳಿದರು.

ನಗರದ ರಿಮ್ಸ್ ಆಸ್ಪತ್ರೆಗೆ‌ ಭೇಟಿಗಾಗಿ ಶನಿವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಆಮ್ಲಜನಕದ ಕೊರತೆ ಇಲ್ಲ. ಇನ್ನೂ 24 ಟನ್ ಸಂಗ್ರಹವಿದೆ. ವೆಂಟಿಲೇಟರ್ ಸಮಸ್ಯೆ ಇದುವರೆಗೂ ಬಂದಿಲ್ಲ ಎಂದರು. ಸೋಂಕಿತರು ಗುಣಮುಖ ಆಗುವುದಕ್ಕೆ ಅಗತ್ಯ‌‌‌ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕ ಶಿವನಗೌಡ ನಾಯಕ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT