ರಾಯಚೂರು: ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರ ಪೈಕಿ ರಾಯಚೂರು ಗ್ರಾಮೀಣ ಹಾಗೂ ಮಸ್ಕಿ ಶಾಸಕರಿಗೆ ಮತ್ತೆ ಟಿಕೆಟ್ ಘೋಷಿಸಲಾಗಿದೆ.
ಪರಿಶಿಷ್ಟ ಜಾತಿಗೆ ಮೀಸಲಾತಿರುವ ಲಿಂಗಸುಗೂರು ವಿಧಾನಸಭೆ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಡಿ.ಎಚ್.ಹುಲಗೇರಿ ಅವರಿಗೆ ಇನ್ನೂ ಟಿಕೆಟ್ ಘೋಷಿಸದಿರುವುದು ಗೊಂದಲಕ್ಕೆ ಎಡೆಮಾಡಿದೆ.
ನಿವೃತ್ತ ಎಂಜಿನಿಯರ್ ರುದ್ರಯ್ಯ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಬೆಂಗಳೂರಿನಿಂದ ಲಿಂಗಸುಗೂರಿಗೆ ಆಗಮಿಸಿದ್ದು, ಟಿಕೆಟ್ ಆಕಾಂಕ್ಷಿಯಾಗಿ ಲಿಂಗಸುಗೂರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೈಗೊಂಡಿದ್ದ ಸಮೀಕ್ಷೆಯಲ್ಲಿ ಹಾಲಿ ಶಾಸಕರ ವಿರುದ್ಧದ ಅಭಿಮತ ವ್ಯಕ್ತವಾಗಿದೆ ಎನ್ನುವುದು ಪಕ್ಷದ ಮೂಲಗಳ ಮಾಹಿತಿ. ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರು ಡಿ.ಎಚ್.ಹುಲಗೇರಿ ಅವರಿಗೆ ಟಿಕೆಟ್ ನೀಡದಂತೆ ಪ್ರಭಾವ ಬೀರುತ್ತಿದ್ದಾರೆ ಎನ್ನುವುದು ಕ್ಷೇತ್ರದಾದ್ಯಂತ ಚರ್ಚೆಯಲ್ಲಿದೆ.
ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಬಸನಗೌಡ ದದ್ದಲ್ ಹಾಗೂ ಮಸ್ಕಿ ಕ್ಷೇತ್ರದಿಂದ ಬಸನಗೌಡ ತುರ್ವಿಹಾಳ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.