ರಾಯಚೂರು: ‘ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರವು ಕಾಂಗ್ರೆಸ್ ಪಕ್ಷದ್ದಾಗಿದ್ದು, ಯಾವುದೇ ಕಾರಣಕ್ಕೂ ಬೇರೆ ಪಕ್ಷಕ್ಕೆಬಿಟ್ಟುಕೊಡಬಾರದು. ಗೆಲುವಿಗಾಗಿ ಎಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕು‘ ಎಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಮಾತನಾಡಿದರು.

‘ಅವರವರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳನ್ನು ಪಡೆಯುವುದಕ್ಕೆ ಮುಖಂಡರು ಶ್ರಮಿಸಬೇಕು. ಗ್ರಾಮ ಪಂಚಾಯಿತಿ ಬಲಪಡಿಸುವುದಕ್ಕೆ ಕಾಂಗ್ರೆಸ್ ಪಕ್ಷವು ಸಾಕಷ್ಟು ಕಾಯ್ದೆಗಳನ್ನು ರೂಪಿಸಿ ಜಾರಿಮಾಡಿದೆ. ಅಧಿಕಾರದ
ವೀಕೇಂದ್ರೀಕರಣ ಪರಿಕಲ್ಪನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಪಕ್ಷವು ಮಾಡಿದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಮಾತನಾಡಿ, ಸದ್ಯ ಕಾಂಗ್ರೆಸ್ ಅಭ್ಯರ್ಥಿಯುಗೆಲ್ಲುವ ವಾತಾವರಣ ಎಲ್ಲ ಕಡೆಗೂ ಎದ್ದು ಕಾಣುತ್ತಿದೆ. ಇದನ್ನು ಉಳಿಸಿಕೊಳ್ಳು ವುದಕ್ಕೆ ಮುಂದಾಗಬೇಕು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಮಾಡಿ ಪಕ್ಷಕ್ಕೆ ಮತನೀಡುವಂತೆ ಮನವೊಲಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಮಾತನಾಡಿ, ‘ಎರಡೂ ಜಿಲ್ಲೆಗಳಲ್ಲಿರುವ ಕಾರ್ತಕರ್ತರು ಸಹಕಾರ ಕೊಟ್ಟು ಪ್ರಚಾರ
ಮಾಡಬೇಕು‘ ಎಂದು ಕೋರಿದರು.

ಶಾಸಕರಾದ ಬಸನಗೌಡ ದದ್ದಲ, ಬಸನಗೌಡ ತುರ್ವಿಹಾಳ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ.ಬಸವರಾಜರೆಡ್ಡಿ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಬಸವರಾಜ ಪಾಟೀಲ ಇಟಗಿ, ಎ.ವಸಂತಕುಮಾರ್, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ ಹಾಗೂ ರುದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.