ಸೋಮವಾರ, ಸೆಪ್ಟೆಂಬರ್ 26, 2022
24 °C

ರಾಯಚೂರು: ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ‌ ಪ್ರವಾಹದ ಅಬ್ಬರ ಜೋರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಪ್ರವಾಹ ಅಬ್ಬರ ಏರುಗತಿಯಲ್ಲಿದ್ದು, ನದಿತೀರದ ಗ್ರಾಮಗಳಲ್ಲಿ ಗುರುವಾರವೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿವೆ.

ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ 2.19 ಲಕ್ಷ ಕ್ಯುಸೆಕ್ ಅಡಿ ನೀರು‌ ಹೊರಬಿಡಲಾಗುತ್ತಿದೆ. ಲಿಂಗಸುಗೂರು ನಡುಗಡ್ಡೆಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಈಗ ಸುಮಾರು 50 ಕಿಮೀ ಸುತ್ತುವರೆದು ಜಲದುರ್ಗ ಮಾರ್ಗದ ಮೂಲಕ ಲಿಂಗಸುಗೂರಿಗೆ ಬರಬೇಕಿದೆ. 

ಪ್ರವಾಹಮಟ್ಟ ಏರುಗತಿಯಲ್ಲಿದ್ದು, 2.5 ಲಕ್ಷ ಕ್ಯುಸೆಕ್ ಗಿಂತ ಹೆಚ್ಚು ನೀರು ಹರಿದುಬಂದರೆ ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಲಿದೆ. ಇದರಿಂದ ಕಲಬುರಗಿ-ರಾಯಚೂರು ಸಂಪರ್ಕದ ಪ್ರಮುಖ ಮಾರ್ಗ ಕಡಿತವಾಗಲಿದೆ. 

ತುಂಗಭದ್ರಾ ನದಿಯಲ್ಲಿ 1.80  ಲಕ್ಷ ಕ್ಯುಸೆಕ್ ನೀರು ಹರಿದುಬರುತ್ತಿದೆ. ಮಾನ್ವಿ ತಾಲ್ಲೂಕಿನ  ನದಿತೀರದ ಕೆಲವು ಗ್ರಾಮಗಳ ಕೃಷಿಬೆಳೆ ನೀರುಪಾಲಾಗಿವೆ. ಯಾವುದೇ ಜೀವ, ಆಸ್ತಿ ಹಾನಿಯಾಗಿಲ್ಲ. ಮಂತ್ರಾಲಯದಲ್ಲಿ ನದಿತಟದ‌ ಮೆಟ್ಟಿಲುಗಳ ಮೇಲೆ ಪ್ರವಾಹವು ತಲುಪಿದೆ.‌

ಓದಿ... ಯಾದಗಿರಿ: ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ, 2.19 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು