ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆಯ 28 ಸ್ಥಾನಗಳಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ಪರ್ಧೆ: ರಾಘವೇಂದ್ರ

Published 4 ಜನವರಿ 2024, 4:55 IST
Last Updated 4 ಜನವರಿ 2024, 4:55 IST
ಅಕ್ಷರ ಗಾತ್ರ

ರಾಯಚೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಈ ಪ್ರಯುಕ್ತ ಅಭ್ಯರ್ಥಿಗಳ ಆಯ್ಕೆಗೆ ಜನವರಿ 6 ಹಾಗೂ 7ರಂದು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂದರ್ಶನ ನಡೆಸಲಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು.

ಪಕ್ಷ ಸದಸ್ಯರಿಂದಲೇ ಶುಲ್ಕ ಸಂಗ್ರಹಿಸಿ ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳಲಿದೆ. ಸದಸ್ಯತ್ವಕ್ಕೆ ₹5 ಸಾವಿರ ಹಾಗೂ ಸಂದರ್ಶನಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳಿಗೆ ₹10 ಸಾವಿರ ನಿಗದಿ ಮಾಡಲಾಗಿದೆ ಎಂದು ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

2023ರ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ 195 ಕ್ಷೇತ್ರಗಳಿಂದ ಸ್ಪರ್ದಿಸಿತ್ತು. ಎದುರಾಳಿ ಪಕ್ಷಗಳ ಹಣಬಲ, ತೋಳ್ಬಲದಿಂದ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಆದರೆ, ಪ್ರಯತ್ನ ಮುಂದುವರಿದಿದೆ’ ಎಂದು ಹೇಳಿದರು.

‘ಪಕ್ಷ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಗಳ ಪುನರ್‌ರಚನೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.

ಬಸವಪ್ರಭು, ವಿಜಯಕುಮಾರ ಪೋಳ, ರಾಮಣ್ಣ, ಎ.ಕುಮಾರನಾಯಕ, ಶಂಕರ ಹಾಗೂ ಗಂಗಾ ಕೆ. ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT