ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ ಆರಂಭ: ಪರೀಕ್ಷೆ ಬರೆದ 28,906 ವಿದ್ಯಾರ್ಥಿಗಳು

Last Updated 31 ಮಾರ್ಚ್ 2023, 13:53 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಾದ್ಯಂತ ಒಟ್ಟು 75 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆ ಶುಕ್ರವಾರ ಶಾಂತಿಯುತವಾಗಿ ನಡೆದಿದ್ದು, ಪ್ರಥಮ ಭಾಷೆಗೆ ಒಟ್ಟು 29,888 ನೋಂದಣಿಯಾಗಿದ್ದ ವಿದ್ಯಾರ್ಥಿಗಳ ಪೈಕಿ 28,906 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಇದೇ ಮೊದಲ ಬಾರಿ ಪರೀಕ್ಷೆ ಬರೆದ 28,420 ವಿದ್ಯಾರ್ಥಿಗಳ ಪೈಕಿ, ಅತಿಹೆಚ್ಚು 14,675 ವಿದ್ಯಾರ್ಥಿನಿಯರು ಹಾಜರಾಗಿದ್ದು ವಿಶೇಷ. ಮರುಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದ 654 ವಿದ್ಯಾರ್ಥಿಗಳ ಪೈಕಿ 486 ಮಾತ್ರ ಹಾಜರಾಗಿದ್ದರು.

ರಾಯಚೂರು ತಾಲ್ಲೂಕಿನಲ್ಲಿ 25, ದೇವದುರ್ಗ ತಾಲ್ಲೂಕಿನಲ್ಲಿ 8, ಲಿಂಗಸುಗೂರು ತಾಲ್ಲೂಕಿನಲ್ಲಿ 14, ಮಾನ್ವಿ ತಾಲ್ಲೂಕಿನಲ್ಲಿ 13 ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 15 ಪರೀಕ್ಷಾ ಕೇಂದ್ರಗಳಿದ್ದು, ಯಾವುದೇ ನಕಲು ಪತ್ತೆಯಾಗಿಲ್ಲ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಯಚೂರು ತಾಲ್ಲೂಕಿನಲ್ಲಿ 8,538 ವಿದ್ಯಾರ್ಥಿಗಳು ಹಾಜರಾಗಿದ್ದು, 616 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದೇವದುರ್ಗ ತಾಲ್ಲೂಕಿನಲ್ಲಿ 3,762 ಹಾಜರಾಗಿದ್ದು, 37 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 152 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಮಾನವಿ ತಾಲ್ಲೂಕಿನ 5,190 ಹಾಜರಾಗಿದ್ದರೆ 63 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿಂಧನೂರು ತಾಲೂಕಿನಲ್ಲಿ 5,366 ವಿದ್ಯಾರ್ಥಿಗಳು ಹಾಜರಾಗಿದ್ದು, 113 ವಿದ್ಯಾರ್ಥಿಗಳು ಗೈರಾಗಿದ್ದಾರೆ.

* ಏಪ್ರಿಲ್‌ 3 ರಂದು ಗಣಿತ, ಸಮಾಜಶಾಸ್ತ್ರ ಪರೀಕ್ಷೆ

* ರಾಯಚೂರಿನಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು

* ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT