ಕಾರ್ತೀಕ ದೀಪೋತ್ಸವ

ಮಸ್ಕಿ: ಕಾರ್ತೀಕ ಮಾಸದ ಪ್ರಯುಕ್ತ ಪಟ್ಟಣದ ಮುಖ್ಯ ಬಜಾರ್ನಲ್ಲಿರುವ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದೀಪೋತ್ಸವ ಕಾರ್ಯಕ್ರಮ ನಡೆಯಿತು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ದೀಪ ಹಚ್ಚುವ ಮೂಲಕ ಚಾಲನೆ ನೀಡಿದರು.
ಬೆಳಿಗ್ಗೆ ವೀರಭದ್ರೇಶ್ವರರ ವಿಗ್ರಹಕ್ಕೆ ಅಭಿಷೇಕ ಮಾಡಲಾಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ನಡೆದ ದೀಪೋತ್ಸವದಲ್ಲಿ ಅನೇಕ ಮುಖಂಡರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.