ಕವಿತಾಳ: ‘ರಸಗೊಬ್ಬರ ಅಕ್ರಮ ಮಾರಾಟ ಮತ್ತು ಹೆಚ್ಚಿನ ದರ ಪಡೆದಲ್ಲಿ ಕ್ರಮ ಕೈಗೊಳ್ಳಲಾಗುವುದು. ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ವಿತರಣೆ ಮಾಡಬೇಕು’ ಎಂದು ಅಂಗಡಿ ಮಾಲೀಕರಿಗೆ ಕೃಷಿ ಸಹಾಯಕ ಅಧಿಕಾರಿ ಶಿವಶರಣ ಭೋವಿ ತಾಕೀತು ಮಾಡಿದರು.

ಪಟ್ಟಣದಲ್ಲಿ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಮಂಗಳವಾರ ಭೇಟಿ ನೀಡಿ ದಾಸ್ತಾನು ಪರಿಶೀಲಿಸಿದ ಅವರು,‘ರಸಗೊಬ್ಬರ ಕೊರತೆ ಉಂಟಾಗಿಲ್ಲ, ರೈತರು ಆತಂಕ ಪಡುವ ಅಗತ್ಯವಿಲ್ಲ, ಕೃತಕ ಅಭಾವ ಸೃಷ್ಟಿ ಮಾಡಿದಲ್ಲಿ ಇಲಾಖೆ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಯೂರಿಯಾ, ಡಿಎಪಿ, ನ್ಯಾನೊ ಯೂರಿಯಾ, 20:20:0:13 ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಅಗತ್ಯ ಸಂಗ್ರಹವಿದ್ದು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಲು ಕ್ರಮ ವಹಿಸಲಾಗಿದೆ, ಎಫ್ಐಡಿ ಅಥವಾ ಆಧಾರ್ ಗುರುತಿನ ಚೀಟಿ ಒದಗಿಸಿ ರೈತರು ರಸಗೊಬ್ಬರ ಖರೀದಿಸಬಹುದು, ಕೆ-ಕಿಸಾನ್ ತಂತ್ರಾಂಶ ಬಳಕೆಯಲ್ಲಿ ಸರ್ವರ್ ಸಮಸ್ಯೆಯಿಂದ ಕೆಲವೆಡೆ ವಿಳಂಬವಾಗುತ್ತಿದೆ. ಈ ಬಗ್ಗೆ ರೈತರು ಆತಂಕ ಪಡದೆ ಅಂಗಡಿ ಮಾಲೀಕರೊಂದಿಗೆ ಸಹಕರಿಸಬೇಕು, ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕು’ ಎಂದು ತಿಳಿಸಿದರು.

ಕೃಷಿ ತಾಂತ್ರಿಕ ಸಹಾಯಕ ಪ್ರಜ್ವಲ್ ಕುಮಾರ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-1712565723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.