ಕವಿತಾಳ: ಸಮೀಪದ ಹಿರೇಹಣಿಗಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಹಿನ್ನೆಲೆಯಲ್ಲಿ ಮನೆ ತೆರವುಗೊಳಿಸಿದ ಪರಿಣಾಮ ಕುಟುಂಬಸ್ಥರು ಕ್ರಿಮಿನಾಶಕ ಬಾಟಲಿಗಳನ್ನು ಮುಂದಿಟ್ಟುಕೊಂಡು ಸೋಮವಾರ ಮೂರು ತಾಸು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

‘ದಿಢೀರನೆ ಮನೆ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮಹಿಳೆಯರು, ಮಕ್ಕ ಳೊಂದಿಗೆ ಬೀದಿಗೆ ಬೀಳುವಂತಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ತೊಗರಿ, ದವಸ ಧಾನ್ಯ, ಬಟ್ಟೆ, ಪಾತ್ರೆಗಳು ಮತ್ತು ಚಿನ್ನದ ಆಭರಣ ಮಣ್ಣಿನಲ್ಲಿ ಹೂತಿವೆ. ಮದುವೆ ಮುಗಿಸಿಕೊಂಡು ಮನೆಗೆ ವಾಪಸಾದ ನಂತರ ಮನೆ ಖಾಲಿ ಮಾಡುವುದಾಗಿ ಮನವಿ ಮಾಡಿದರೂ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮನೆ ಕೆಡವಲಾಗಿದೆ. ದೌರ್ಜನ್ಯದಿಂದ ಬೇಸತ್ತಿದ್ದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’ ಎಂದು ಮನೆ ಮಾಲೀಕ ನವೀನಕುಮಾರ ಆಕ್ರೋಶ ವ್ಯಕ್ತಪಡಿಸಿದರು.

‘ಆಸ್ತಿ ಮೌಲ್ಯಮಾಪನ ಮತ್ತು ಪರಿಹಾರ ನಿಗದಿ ಮಾಡುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ. ಈ ಬಗ್ಗೆ ಭೂಸ್ವಾಧೀನ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಭೀಮಣ್ಣ ಮತ್ತು ಶರಣಪ್ಪ ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿದ ಸಿರವಾರ ತಹಶೀಲ್ದಾರ್ ಅಶೋಕ ಪವಾರ್ ಮತ್ತು ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಸಿದ್ದಯ್ಯ ಹಿರೇಮಠ ಅವರು ಮಾತನಾಡಿ, ‘ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಕಾಮಗಾರಿ ಕೈಗೊಳ್ಳಲು ಅವಕಾಶ ನೀಡುವಂತೆ ಹೇಳಿದರು. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಕುಟುಂಬಸ್ಥರು ಪರಿಹಾರ ವಿತರಿಸಿ ಕಾಮಗಾರಿ ಕೈಗೊಳ್ಳುವಂತೆ ಪಟ್ಟು ಹಿಡಿದರು.

ಸ್ಥಳಕ್ಕೆ ಆಗಮಿಸಿದ ಸಿರವಾರ ಸರ್ಕಲ್ ಇನ್ ಸ್ಪೆಕ್ಟರ್ ಎಂ.ಶಶಿಕಾಂತ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿಭಟನಕಾರರೊಂದಿಗೆ ಚರ್ಚಿಸಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.

ಅಧಿಕಾರಿಗಳು ಪರಿಹಾರ ವಿತರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-32-1724674849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.