ಕವಿತಾಳ: ಪಟ್ಟಣ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಈಚೆಗೆ ಮುಂಗಾರು ಪೂರ್ವ ಮಳೆ ಸುರಿದ ಹಿನ್ನೆಲೆಯಲ್ಲಿ ಭೂಮಿ ಹದವಾಗಿದ್ದು, ಬಿತ್ತನೆ ಕಾರ್ಯ ಚುರುಕು ಪಡೆದಿದೆ.

ಬೇಸಿಗೆಯಲ್ಲಿ ಭೂಮಿಯಲ್ಲಿನ ಕಳೆ, ಕಸ, ಕಡ್ಡಿ ತೆಗೆದು ಹಸನುಗೊಳಿಸಿದ್ದ ರೈತರು ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದರು. ಈಚೆಗೆ ಸುರಿದ ಧಾರಾಕಾರ ಮಳೆಗೆ ಭೂಮಿ ಹದವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಕೊಳವೆಬಾವಿ ಆಧಾರಿತ ಜಮೀನುಗಳಲ್ಲಿ ರೈತರು ಈಗಾಗಲೇ ಹತ್ತಿ ಬಿತ್ತನೆ ಮಾಡಿದ್ದಾರೆ. ಈಗ ಉತ್ತಮ ಮಳೆ ಸುರಿದ ಹಿನ್ನೆಲೆಯಲ್ಲಿ ಹತ್ತಿ ಮತ್ತು ತೊಗರಿ ಬಿತ್ತನೆಗೆ ರೈತರು ಮುಂದಾಗಿದ್ದಾರೆ.

ಕೃಷಿ ಇಲಾಖೆ ಪ್ರಕಾರ ಹೋಬಳಿ ವ್ಯಾಪ್ತಿಯ ಅಂದಾಜು 15,440 ಹೆಕ್ಟೇರ್ ಕೃಷಿ ಭೂಮಿಯಲ್ಲಿ ತೊಗರಿ 4,900 ಹೆಕ್ಟೇರ್, ಹತ್ತಿ 6 ಸಾವಿರ ಹೆಕ್ಟೇರ್ ಸೇರಿದಂತೆ ಸಜ್ಜೆ, ಹೆಸರು, ಸೂರ್ಯಕಾಂತಿ ಹಾಗೂ ಮತ್ತಿತರ ಬೆಳೆ ಬೆಳೆಯುವ ಗುರಿ ಹೊಂದಲಾಗಿದೆ.

ಕಳೆದ ಸಾಲಿನಲ್ಲಿ ತೊಗರಿ 6,500 ಹೆಕ್ಟೇರ್, ಹತ್ತಿ 3 ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿತ್ತು. ಬೆಂಬಲ ಬೆಲೆ ಹೆಚ್ಚಿದ ಪರಿಣಾಮ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಹತ್ತಿ ಮತ್ತು ತೊಗರಿ ಬಿತ್ತನೆಗೆ ರೈತರು ಆಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-32-591912465

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.