ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿತಾಳ: ಬೆಳೆ ಹಾನಿ ಪರಿಶೀಲಿಸಿದ ಶಾಸಕ ಬಸನಗೌಡ ತುರುವಿಹಾಳ

Published 13 ನವೆಂಬರ್ 2023, 11:23 IST
Last Updated 13 ನವೆಂಬರ್ 2023, 11:23 IST
ಅಕ್ಷರ ಗಾತ್ರ

ಕವಿತಾಳ: ಮಸ್ಕಿ ತಾಲ್ಲೂಕಿನ ತೋರಣದಿನ್ನಿ, ಮಲ್ಕಾಪುರ ಮತ್ತು ಶಂಕರನಗರ ಕ್ಯಾಂಪ್ ಸೇರಿ ವಿವಿಧೆಡೆ ಶಾಸಕ ಆರ್.ಬಸನಗೌಡ ತುರುವಿಹಾಳ ಅವರು ಸೋಮವಾರ ಬೆಳೆ ಹಾನಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ,‘ಮಳೆಯಿಂದ ಭತ್ತದ ಬೆಳೆಗೆ ಹಾನಿಯಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ವರದಿಯನ್ನು ಶೀಘ್ರ ಸರ್ಕಾರಕ್ಕೆ ಸಲ್ಲಿಸಿದರೆ ರೈತರಿಗೆ ಪರಿಹಾರ ನೀಡಲು ಅನುಕೂಲವಾಗುತ್ತದೆ’ ಎಂದರು.

ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಮುಖಂಡರಾದ ಶರಣಪ್ಪಗೌಡ ತೋರಣದಿನ್ನಿ, ಸುರೇಶ ಸ್ವಾಮಿ, ಮಾರೆಪ್ಪ ಸಾಹುಕಾರ, ನಿಂಗಯ್ಯ, ತಹಶೀಲ್ದಾರ್ ಸುಧಾ ಅರಮನೆ, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಹುಸೇನಸಾಬ್ ಹಾಗೂ ಮತ್ತಿತರರು ಇದ್ದರು.

ಹಾಲಾಪುರ ಹೋಬಳಿ ವ್ಯಾಪ್ತಿಯ ವಿವಿಧ ಹಳ್ಳಿಗಳು ಮತ್ತು ಕ್ಯಾಂಪ್‌ಗಳಲ್ಲಿ ಶಾಸಕರು ಮತ್ತು ಅಧಿಕಾರಿಗಳು ಬೆಳೆ ಹಾನಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT