ಕವಿತಾಳ: ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಸೋಮವಾರ ಮದ್ಯಾಹ್ನ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಸುರಿಯಿತು. ಪಾಮನಕಲ್ಲೂರು ಗ್ರಾಮದಲ್ಲಿ ಸುರಿದ ಆಲಿಕಲ್ಲು ಸಹಿತ ಧಾರಾಕಾರ ಮಳೆ ಬೇಸಿಗೆ ರಣ ಬಿಸಿಲಿನ ತಾಪವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿತು.

ಯುಗಾದಿ ಹಬ್ಬಕ್ಕೂ ಮುನ್ನ ಅನಿರೀಕ್ಷತವಾಗಿ ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದ್ದರೂ ಕಟಾವು ಮಾಡಿ ಒಣಗಲು ಹಾಕಿದ್ದ ಸಜ್ಜೆ ಬೆಳೆ ರಕ್ಷಿಸಿಕೊಳ್ಳಲು ರೈತರು ಪರದಾಡಿದರು.

ಪಾಮನಕಲ್ಲೂರು ಗ್ರಾಮದಲ್ಲಿ ಮಹಿಳೆಯರು ಮಕ್ಕಳು ಆಲಿಕಲ್ಲು ಕೈ ಯಲ್ಲಿ ಹಿಡಿದು ಸಂಭ್ರಮಿಸಿದರು. ಇಲ್ಲಿನ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕರು ಅಂಗಡಿಗಳ ಬಳಿ ಮಳೆಯಿಂದ ರಕ್ಷಣೆ ಪಡೆದರು. ವಟಗಲ್ ಗ್ರಾಮದಲ್ಲಿ ರಸ್ತೆಯಲ್ಲಿ ನೀರು ಹರಿಯುವಂತೆ ಧಾರಾಕಾರ ಮಳೆ ಸುರಿದಿದೆ ಎಂದು ಸುಭಾಷ್ ಕಡಬೂರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.