ಕವಿತಾಳ: ಸಮೀಪದ ಲಕ್ಷ್ಮೀ ನಾರಾಯಣ ಕ್ಯಾಂಪ್ನಲ್ಲಿ ಕೋದಂಡರಾಮ ದೇವಸ್ಥಾನದ ರಜತ ಮಹೋತ್ಸವ ಆಚರಿಸಲಾಯಿತು.

ಬೆಳ್ಳಿ ಹಬ್ಬದ ಅಂಗವಾಗಿ ಬಾಜಾ–ಭಜಂತ್ರಿ ಹಾಗೂ ಮತ್ತಿತರ ಮಂಗಳ ವಾದ್ಯಗಳೊಂದಿಗೆ ಕುಂಭ–ಕಳಸದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ದೇವಸ್ಥಾನದಲ್ಲಿ ಹೋಮ–ಹವನ, ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಅರ್ಚಕ ಸಾಯಿ ಪವನ್ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.

ಶಾಸಕ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ, ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ಮುಖಂಡರಾದ ಚಂದ್ರಕಾಂತ ಪಾಟೀಲ ಗೋಗೆಬಾಳ, ಸೂರ್ಯಕಾಂತಗೌಡ, ದೇವರಾಜ ಬಾಗೋಡಿ, ರಮೇಶ ಸೇರಿದಂತೆ ಗಣ್ಯರು ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಸ್ಥಳೀಯ ನಿವಾಸಿಗಳು ಮತ್ತು ಸುತ್ತಲಿನ ಕ್ಯಾಂಪ್ ನಿವಾಸಿಗಳು ಕಾಯಿ–ಕರ್ಪೂರ, ನೈವೇದ್ಯ ಸಮರ್ಪಿಸಿ, ಪೂಜೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-32-1532688843

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.