ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿತಾಳ‌ | ಮೊರಾರ್ಜಿ ದೇಸಾಯಿ ವಸತಿ ಶಾಲೆ: ಅತಿಥಿ ಶಿಕ್ಷಕಿ ನೇಮಕ

Published 6 ಡಿಸೆಂಬರ್ 2023, 13:12 IST
Last Updated 6 ಡಿಸೆಂಬರ್ 2023, 13:12 IST
ಅಕ್ಷರ ಗಾತ್ರ

ಕವಿತಾಳ: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕಿಯೊಬ್ಬರುನ್ನು ನೇಮಕ ಮಾಡಿಕೊಳ್ಳಲಾಗಿದೆ.

‘ಪಾಠ ಕೇಳಲು, ನಿದ್ರಿಸಲು ನೆಲವೇ ಗತಿ’ ಶೀರ್ಷಿಕೆಯಡಿ ಡಿ.2 ರಂದು ಪ್ರಜಾವಾಣಿಯಲ್ಲಿ ವರದಿ ಪ್ರಕಟವಾಗಿತ್ತು.

ವರದಿ ಗಮನಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜೇಂದ್ರ ಜಲ್ದಾರ ಅವರು ಇಲ್ಲಿನ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಿ ಅತಿಥಿ ಶಿಕ್ಷಕರ ನೇಮಕ ಮಾಡುವಂತೆ ಮತ್ತು ಮಕ್ಕಳಿಗೆ ಬೆಂಚು, ಮಂಚ ವಿತರಣೆಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

‘ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕಿಯನ್ನು ನೇಮಕ ಮಾಡಿಕೊಂಡಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣವಾದರೆ ಬೆಂಚು, ಮಂಚ ಪೂರೈಕೆ ಆಗಲಿವೆ’ ಎಂದು ಮುಖ್ಯ ಶಿಕ್ಷಕ ಅಂದಪ್ಪ ತಿಳಿಸಿದರು.

ಕವಿತಾಳದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕಿಯನ್ನು ನೇಮಕ ಮಾಡಿಕೊಳ್ಳಲಾಗಿದೆ.
ಕವಿತಾಳದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕಿಯನ್ನು ನೇಮಕ ಮಾಡಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT