ಕವಿತಾಳ: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದ ಆರ್‌ಎಂಎಸ್ ಬಾಲಕಿಯರ ವಸತಿ ನಿಲಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಅಕ್ಷತಾ ಗಂಗಾಧರ (16) ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಚಿಲ್ಕರಾಗಿ ಗ್ರಾಮದ ಅಕ್ಷತಾ ಬ್ಲೇಡ್ ಅಥವಾ ಗಾಜಿನ ಬಳೆ ಚೂರು ಬಳಸಿ ಕೈ ಮತ್ತು ಕತ್ತಿನ ಕೆಳಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ.
‘ಬಾಲಕಿಯ ಚೀರಾಟ ಗಮನಿಸಿದ ವಿದ್ಯಾರ್ಥಿಗಳು ಅಡುಗೆ ಸಹಾಯಕರಿಗೆ ಮಾಹಿತಿ ನೀಡಿದ್ದು ತುರ್ತು ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದರು’ ಎಂದು ವಸತಿ ನಿಲಯದ ಮೇಲ್ವಿಚಾರಕಿ ಗಂಗಮ್ಮ ಹೇಳಿದರು.
ಬಾಲಕಿಗೆ ಕವಿತಾಳದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಕವಿತಾಳ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
‘ತಕ್ಷಣ ಆಸ್ಪತ್ರೆಗೆ ಕರೆತಂದಿದ್ದರಿಂದ ಪ್ರಾಣಾಪಾಯವಿಲ್ಲ, ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್‌ಗೆ ಕಳುಹಿಸಲಾಗಿದೆ’ ಎಂದು ಡಾ.ಪ್ರವೀಣಕುಮಾರ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.