ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಧನೂರು: ಜುಲೈ 5ರಂದು ಕೆಡಿಪಿ ಸಭೆ

Published 2 ಜುಲೈ 2024, 14:24 IST
Last Updated 2 ಜುಲೈ 2024, 14:24 IST
ಅಕ್ಷರ ಗಾತ್ರ

ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿ ಅವರ ಅಧ್ಯಕ್ಷತೆಯಲ್ಲಿ ಜುಲೈ 5 ರಂದು ಬೆಳಿಗ್ಗೆ 11.30ಕ್ಕೆ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ  ಚಂದ್ರಶೇಖರ ತಿಳಿಸಿದ್ದಾರೆ.

ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟಂತೆ 2024ನೇ ಸಾಲಿನ ( ಜೂನ್ ಅಂತ್ಯದವರೆಗೆ) ಪ್ರಗತಿ ವರದಿಯನ್ನು ಜುಲೈ 3ರ ಬೆಳಿಗ್ಗೆ 11 ಗಂಟೆ ಒಳಗೆ ಗೆಸಲ್ಲಿಸಬೇಕು. ಸಭೆಗೆ ತಮ್ಮ ಪ್ರತಿನಿಧಿಗಳನ್ನು ಕಳುಹಿಸದೆ ಸ್ವತಃ ತಾವೇ ಹಾಜರಾಗಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT