ಗುಂಡು ಹಾರಿಸುವ ಬೆದರಿಕೆ: ಕುನ್ನಟಗಿ ಗ್ರಾಮದ ಮನೆಯ ಮೇಲೆ ಪೊಲೀಸರ ತಂಡ ದಾಳಿ ನಡೆಸಿದಾಗ, ಅಪಹರಣಕಾರರು ಪಿಸ್ತೂಲ್ ತೋರಿಸಿ ಮನೆಯೊಳಗೆ ಬಂದರೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದರು. ತಕ್ಷಣವೇ ಪೊಲೀಸ್ ಅಧಿಕಾರಿಗಳು ಠಾಣೆಯಿಂದ ಹೆಚ್ಚುವರಿ ಸಿಬ್ಬಂದಿ ಹಾಗೂ ಶಸ್ತ್ರಾಸ್ತ್ರಗಳನ್ನು ತರಿಸಿಕೊಂಡು ಮನೆಯನ್ನು ಸುತ್ತುವರಿದರು. ಬಳಿಕ ಮನೆಯೊಳಗೆ ನುಗ್ಗಿ ಆರೋಪಿಗಳಾದ ರಾಮು ಅಪ್ಪರಾಜು, ದತ್ತ ಶಿವಾಜಿ, ಹರ್ಷಕ ಸುರೇಶ ಪಾಟೀಲ್‍ನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.