ಮಕ್ಕಳಿಂದ ದೇಶದ ಭವಿಷ್ಯ ನಿರ್ಮಾಣ

7
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಅಭಿಮತ

ಮಕ್ಕಳಿಂದ ದೇಶದ ಭವಿಷ್ಯ ನಿರ್ಮಾಣ

Published:
Updated:
Deccan Herald

ರಾಯಚೂರು: ದೇಶದ ಮುಂದಿನ ಭವಿಷ್ಯ ನಿಂತಿರುವುದು ಮಕ್ಕಳ ಮೇಲೆ ಎಂದು ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಿಂದ ‘ಬಾಲನ್ಯಾಯ ಕಾಯ್ದೆ-2015 ಮತ್ತು ಮಕ್ಕಳ ಸಂರಕ್ಷಣಾ ಕಾಯ್ದೆಗಳ’ ಕುರಿತು ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಹಕ್ಕು ಕಾಪಾಡಲು ಹಲವಾರು ಕಾಯ್ದೆಗಳಿದ್ದು, ಅವುಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ತರುವಲ್ಲಿ ಸಫಲರಾಗಿಲ್ಲ ಎನ್ನುವುದನ್ನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದರು.

ಪೊಲೀಸ್, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸಾರ್ವಜನಿಕರೊಂದಿಗೆ ಕೈಜೋಡಿಸಿದಾಗ ಅವರಿಗೆ ಮನವರಿಕೆಯಾಗುತ್ತದೆ. ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ಮಾಡುತ್ತಲೆ ಬಂದಿದೆ. ಆದರೆ ಆ ಕುರಿತು ಜಾಗೃತಿ ಮೂಡಿಸಿಲ್ಲ ಎಂದರು.

ಮಕ್ಕಳ ಸಂರಕ್ಷಣೆಯ ಜವಾಬ್ದಾರಿ ಪಾಲಕರದು ಮಾತ್ರವಲ್ಲ. ಅದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯು ಆಗಿದ್ದು, ಅವರು ಎಲ್ಲಿ ಹೋಗುತ್ತಾರೆ ಏನು ಮಾಡುತ್ತಾರೆ ಎಂದು ಗಮನಿಸುತ್ತಿರಬೇಕು ಎಂದು ಹೇಳಿದರು.

ಒಂದನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಎಂ.ಮಹಾದೇವಯ್ಯ, ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಬಾಲನ್ಯಾಯ ಮಂಡಳಿಯ ಅಧ್ಯಕ್ಷ ಶ್ರೀನಿವಾಸ್ ಸುವರ್ಣ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಸಿ.ನಾಡಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮೊಹ್ಮದ್ ಯೂಸುಫ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಪಾಟೀಲ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುಪ್ರಸಾದ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !