‘ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಮನಗೊಳಿ ಅಭಿನವ ಸಂಗನಬಸವಸ್ವಾಮಿ ಹಿರೇಮಠ, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ಕರಿಬಸವನಗರದ ಸೋಮನಾಥ ಶಿವಾಚಾರ್ಯರು, ವೆಂಕಟಗಿರಿ ಕ್ಯಾಂಪ್‌ನ ದ್ದರಾಮೇಶ್ವರ ಶರಣರು, ಜಂಗಮರಹಳ್ಳಿಯ ಚಂದ್ರಮೌನೇಶ ತಾತನವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿವರು. ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರವಿಹಾಳ, ಸಂಸದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಪಿ.ಪಾಟೀಲ ಸೇರಿದಂತೆ ಅನೇಕ ಹಾಲಿ–ಮಾಜಿ ಜನಪ್ರತಿನಿಧಿಗಳು, ಸಮುದಯದ ಮುಖಂಡರು, ಗಣ್ಯರು ಭಾಗಿಯಾಗಲಿದ್ದಾರೆ’ ಎಂದು ಮಾಹಿತಿ ನೀಡಿದರು.