ಲಿಂಗಸುಗೂರು: ಪಶ್ಚಿಮ ಬಂಗಾಳದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಶನಿವಾರ ರಾತ್ರಿ ಭಾರತೀಯ ವೈದ್ಯಕೀಯ ಸಂಘ, ಆಯುಷ್ ವೈದ್ಯಾಧಿಕಾರಿ ಸಂಘ ಮತ್ತು ಆಯುರ್ವೇದಿಕ್ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.
ಇಲ್ಲಿನ ಗಡಿಯಾರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಎನ್ನುವ ಫಲಕ ಹಾಗೂ ಮೊಂಬತ್ತಿ ಹಿಡಿದು ಸಾಗಿದರು.
ವೈದ್ಯರು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.