ಕೊಪ್ಪಳ–ರಾಯಚೂರು ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ನ ಶರಣಗೌಡ ಬಯ್ಯಾಪುರಗೆ ಜಯ

ರಾಯಚೂರು: ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ 400 ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಅವರು ಸೋಲು ಅನುಭವಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಯಲ್ಲಿ ಸೋಲು–ಗೆಲುವು ಸಾಮಾನ್ಯ. ಕ್ಷೇತ್ರದ ಮತದಾರರು ನನಗೆ 2,945 ಮತಗಳನ್ನು ನೀಡಿರುವುದಕ್ಕೆ ಚಿರಋಣಿ. ಈ ಸೋಲಿಗೆ ಯಾರೂ ಕಾರಣರಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ’ ಎಂದರು.
ಸಿಹಿ ಹಂಚಿ ಸಂಭ್ರಮ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ ಅವರಿಗೆ ಶಾಸಕರಾದ ಬಸನಗೌಡ ದದ್ದಲ ಹಾಗೂ ಡಿ.ಎಸ್.ಹುಲಗೇರಿ ಅವರು ಸಿಹಿ ತಿನ್ನಿಸಿದರು.
ಇದನ್ನೂ ಓದಿ: Live ಪರಿಷತ್ ಫಲಿತಾಂಶ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿಗೆ ಜಯ Live
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.