ಗುರುವಾರ , ಮಾರ್ಚ್ 23, 2023
28 °C

ರಾಯಚೂರು: ‘19ರಂದು ಕೊಪ್ಪಳ ಚಲೋ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಬರಗೂರ ದಾನಪ್ಪ ಮತ್ತು ಕಕ್ಕರಗೋಳ ರಾಘವೇಂದ್ರನ ಕೊಲೆ ಪ್ರಕರಣ ಸೇರಿ ಕನಕಗಿರಿ ವಿಧಾನಸಭಾ ವ್ಯಾಪ್ತಿಯಲ್ಲಿ ನಡೆದ ಎಲ್ಲಾ ಕೊಲೆ ಪ್ರಕರಣಗಳ ನ್ಯಾಯಾಂಗ ತನಿಖೆ ನಡೆಸಬೇಕು. ಕೊಲೆಯಾದ ಯುವಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಜುಲೈ 19ರಂದು ದಲಿತ ದಮನಿತರ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ಸಂಚಾಲಕ ಎಂ.ಆರ್. ಭೇರಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಲ್ಲೆಯ ಜನರು ನೂರಾರು ಸಂಖ್ಯೆಯಲ್ಲಿ ಭಾಗವಹಿ
ಸಲಿದ್ದಾರೆ. ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರ ಮೇಲೆ ನಿರಂತರ ಕೊಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾ
ಗುತ್ತಿವೆ. ಜೂನ್ 22ರಂದು ಮೇಲ್ಜಾತಿಯ ಯುವತಿ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಕಾರಟಗಿ ತಾಲ್ಲೂಕಿನ ಬರಗೂರ ಗ್ರಾಮದ ಯುವಕ ದಾನಪ್ಪನನ್ನು ಕೊಲೆ ಮಾಡಲಾಗಿದೆ‘ಎಂದರು.

’ಗ್ರಾಮದ ಸರ್ಕಾರಿ ಭೂಮಿಯನ್ನು ಬಡವರಿಗೆ ಹಂಚಿಕೆ ಮಾಡಿ ಎಂದು ಹೋರಾಟ ಮಾಡಿದ ಕಕ್ಕರಗೋಳ ಗ್ರಾಮದ ರಾಘವೇಂದ್ರ ಎಂಬ ಪರಿಶಿಷ್ಟ ಯುವಕನ್ನು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಪ್ರಮುಖ ಆರೋಪಿಗಳನ್ನು ಬಂಧಿಸದೇ ಕೆಲವರನ್ನು ಮಾತ್ರ ಬಂಧಿಸಲಾಗಿದೆ. ಪ್ರಕರಣವನ್ನು ಸಿಒಡಿ ತನಿಖೆ ನಡೆಸಲು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ‘ ಎಂದು ಆರೋಪಿಸಿದರು.

ಹಲವಾರು ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಪರಿಶಿಷ್ಠರ ಮೇಲೆ ದೌರ್ಜನ್ಯ ನಡೆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದರು.

ಜುಲೈ 19ರಂದು ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಜಿಲ್ಲೆಯ ಪ್ರಗತಿಪರರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮುಖಂಡ ಜೆ.ಬಿ. ರಾಜು, ಮಾರೆಪ್ಪ ಹರವಿ, ಖಾಜಾ ಅಸ್ಲಂ ಅಹ್ಮೆದ್ ಮತ್ತಿತರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು