ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್‌ ನಡಿಗೆ: ನೀರಜ್‌, ಕರಮ್‌ ಸ್ಪರ್ಧೆ

Last Updated 16 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ ನೀರಜ್‌ ರಾಠಿ ಮತ್ತು ಕರಮ್‌ಜೀತ್‌ ಕೌರ್‌ ಅವರು  ಮಾರ್ಚ್‌ 18ರಿಂದ ಜಪಾನ್‌ನಲ್ಲಿ ಆರಂಭವಾಗಲಿರುವ ಏಷ್ಯನ್‌ ನಡಿಗೆ ಚಾಂಪಿಯನ್‌ಷಿಪ್‌ನಲ್ಲಿ ಕ್ರಮವಾಗಿ ಪುರುಷ ಮತ್ತು ಮಹಿಳೆಯರ 20ಕಿ.ಮೀ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಇತ್ತೀಚೆಗೆ ನಡೆದ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ನೀರಜ್ (1ಗಂಟೆ, 21ನಿಮಿಷ, 39ಸೆಕೆಂಡು) ಕಂಚಿನ ಪದಕ ಗೆದ್ದುಕೊಂಡಿದ್ದರು. ಮಹಿಳೆಯರ ವಿಭಾಗದಲ್ಲಿ ಕರಮ್‌ಜೀತ್ (1ಗಂ, 34ನಿ, 08ಸೆ) ಕೂಡ ಕಂಚಿಗೆ ಕೊರಳೊಡ್ಡಿದ್ದರು. ಮುಂದಿನ ತಿಂಗಳು ಗೋಲ್ಡ್‌ ಕೋಸ್ಟ್‌ನಲ್ಲಿ ನಡೆಯುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕೂಡ ನೀರಜ್ ಹಾಗೂ ಕರಮ್‌ಜೀತ್ ಸ್ಪರ್ಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT