ರಾಯಚೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸಮಾನ ವೇತನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯಿಂದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕೆಎಸ್ಆರ್‌ಟಿಸಿ ಸರ್ಕಾರದ ಒಡೆತನದ ಸಂಸ್ಥೆಯಾಗಿದ್ದೂ ದೇಶದಲ್ಲಿಯೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸರ್ಕಾರ ಅಗತ್ಯ ಸೌಲಭ್ಯ ನಿಡದೇ ವಂಚನೆ ಮಾಡುತ್ತಿದೆ. ಕಳೆದ ನವೆಂಬರ್ 6 ರಂದು ಮಹಾಮಂಡಳಿಯಿಂದ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಇದುವರೆಗೆ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ದೂರಿದರು.

ಸರ್ಕಾರಿ ನೌಕರರ ವೇತನ ಶ್ರೇಣಿಯನ್ನು ಇತರೆ ನೌಕರರಿಗೂ ಅನುಸರಿಸಬೇಕು. ಹೊಸ ವೇತನ ಪರಿಷ್ಕರಣೆಯನ್ನು 2020 ಜನವರಿಯಿಂದಲೇ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

25 ವರ್ಷಗಳಿಂದ ವೇತನ ತಾರತಮ್ಯ ಎದುರಿಸುತ್ತಿದ್ದು, ಸಾರಿಗೆ ನೌಕರರಿಗೆ ಶಾಸನಬದ್ಧವಾಗಿ ನೀಡಬೇಕಾದ ಸೌಲಭ್ಯಗಳು ದೊರೆಯುತ್ತಿಲ್ಲ. ಕೂಡಲೇ ಸರ್ಕಾರ ನೌಕರರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸಬೇಕು ಎಂದರು.

ಸಂಘಟನೆಯ ಅಧ್ಯಕ್ಷ ಡಾ.ಕೆ.ಎಸ್.ಶ್ಯಾಮ್, ಜಂಬಣ್ಣ, ಮರಿಯಪ್ ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.