ಮಂಗಳವಾರ, ಮೇ 18, 2021
30 °C

ರಾಯಚೂರು: ಕರ್ತವ್ಯಕ್ಕೆ‌ ಹಾಜರಾಗುತ್ತಿರುವ ಸಾರಿಗೆ ‌ನೌಕರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕರ್ನಾಟಕ ರಾಜ್ಯ ಈಶಾನ್ಯ ಸಾರಿಗೆ ನಿಗಮ (ಎನ್ ಇಕೆಆರ್ ಟಿಸಿ) ರಾಯಚೂರು ವಿಭಾಗೀಯ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದು ಈಗಾಗಲೇ ಕೇಂದ್ರ ಬಸ್ ನಿಲ್ದಾಣದಿಂದ ಬಸ್ಸುಗಳ ಸಂಚಾರ ಆರಂಭವಾಗಿದೆ.

ರಾಯಚೂರಿನಿಂದ ದೇವದುರ್ಗ ಲಿಂಗಸುಗೂರು, ಮಾನ್ವಿ, ಸಿಂಧನೂರು ಸೇರಿದಂತೆ ಜಿಲ್ಲೆಯಾದ್ಯಂತ ಬಸ್ಸುಗಳು ಸಂಚರಿಸುತ್ತಿವೆ. ಅಲ್ಲದೆ ನೆರೆಯ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಬಸ್ಸು ಸಂಚಾರ ಆರಂಭಿಸಿವೆ.

ಹೈಕೋರ್ಟ್ ಸಲಹೆ ಆಧರಿಸಿ ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಸಂಜೆ ಹೊತ್ತಿಗೆ‌ ಹಾಜರಾತಿ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಸದ್ಯ ಶೇ 30 ರಷ್ಟು ನೌಕರರು ಬಂದಿದ್ದಾರೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು