ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಸ್ತಕ ಓದುವ ಸಂಸ್ಕೃತಿ ಬೆಳೆಸಿ: ಕುಂ.ವೀ

ನೇತಾಜಿ ಶಿಕ್ಷಣ ಸಂಸ್ಥೆಗೆ ಸಾಹಿತ್ಯಿಕ ಕೃತಿಗಳ ದೇಣಿಗೆ
Published 26 ಜುಲೈ 2023, 14:12 IST
Last Updated 26 ಜುಲೈ 2023, 14:12 IST
ಅಕ್ಷರ ಗಾತ್ರ

ಮಾನ್ವಿ: ‘ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಸಾಹಿತ್ಯಿಕ ಕೃತಿಗಳನ್ನು ಓದುವ ಸಂಸ್ಕೃತಿ ಬೆಳೆಸಬೇಕು’ ಎಂದು ಸಾಹಿತಿ ಕುಂ.ವೀರಭದ್ರಪ್ಪ ಸಲಹೆ ನೀಡಿದರು.

ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಗೆ ಈಚೆಗೆ ಭೇಟಿ ನೀಡಿದ್ದ ಅವರು, ತಮ್ಮ ಸಂಗ್ರಹದಲ್ಲಿನ ನೂರು ಪುಸ್ತಕಗಳನ್ನು ಸಂಸ್ಥೆಯ ಗ್ರಂಥಾಲಯಕ್ಕೆ ದೇಣಿಗೆ ನೀಡಿ ಮಾತನಾಡಿದರು. ‘ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಜ್ಞೆ ಹಾಗೂ ಸಾಮಾಜಿಕ ಕಳಕಳಿ ಮೂಡಿಸಬೇಕು. ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ ಉತ್ತಮ ವ್ಯಕ್ತಿತ್ವ ರೂಪಿಸಬೇಕು’ ಎಂದು ಅವರು ಸಲಹೆ ನೀಡಿದರು.

ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ, ಕಾರ್ಯದರ್ಶಿ ಕೆ.ವಿಜಯಲಕ್ಷ್ಮಿ, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT