ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ ಕುವೆಂಪು ಅವರ ಜಯಂತಿ ಆಚರಣೆ

Published 29 ಡಿಸೆಂಬರ್ 2023, 15:14 IST
Last Updated 29 ಡಿಸೆಂಬರ್ 2023, 15:14 IST
ಅಕ್ಷರ ಗಾತ್ರ

ಮಾನ್ವಿ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ವಿಶ್ವ ಮಾನವ ರಾಷ್ಟ್ರ ಕವಿ ಕುವೆಂಪು ಅವರ ಜಯಂತಿ ಆಚರಣೆ ಮಾಡಲಾಯಿತು.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ ಅವರು ರಾಷ್ಟ್ರ ಕವಿ ಕುವೆಂಪುರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ನಂತರ ಮಾತನಾಡಿದ ಅವರು, ’ಸಾಹಿತ್ಯ ಕ್ಷೇತ್ರದ ಮೂಲಕ ವೈಚಾರಿಕ ತತ್ವಗಳು ಹಾಗೂ ವಿಶ್ವ ಮಾನವ ಸಂದೇಶ ನೀಡಿದ ಕುವೆಂಪು ಅವರ ತತ್ವಾದರ್ಶಗಳ ಪಾಲನೆ ಅಗತ್ಯ‘ ಎಂದರು.

ಕಚೇರಿ ಅಧೀಕ್ಷಕ ನಿಂಗನಗೌಡ, ಇತರ ಸಿಬ್ಬಂದಿ ರಾಮಲಿಂಗಪ್ಪ, ರಾಜಶೇಖರ, ವಾಸೀಂ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT