ಗುರುವಾರ , ಜನವರಿ 21, 2021
30 °C

ರಾಯಚೂರು: ಕೇಂದ್ರದ ನೀತಿ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವುದನ್ನು ಬೆಂಬಲಿಸಿ ರಾಯಚೂರಿನಲ್ಲಿ ಸಿಐಟಿಯು, ಸಿಟಿಯು ಹಾಗೂ ‌ಎಐಟಿಯುಸಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರಸ್ತೆತಡೆ ಮಾಡಿದ್ದು, ಪೊಲೀಸರು ವಾಹನಗಳನ್ನು ಪರ್ಯಾಯ ಮಾರ್ಗಗಳಿಗೆ ಕಳುಹಿಸುತ್ತಿದ್ದಾರೆ. ಕೇಂದ್ರ ಬಸ್ ನಿಲ್ದಾಣದಿಂದ ಬಸ್‌ಗಳ ಸಂಚಾರಕ್ಕೂ ವ್ಯತ್ಯಯವಾಗಿದೆ. ಕೆಲವೇ ಬಸ್‌ಗಳು ಪರ್ಯಾಯ ಮಾರ್ಗದಿಂದ ಸಂಚರಿಸುತ್ತಿವೆ.

ಕೆಂಪು ಧ್ವಜಗಳನ್ನು ಹಿಡಿದಿರುವ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಕೇಂದ್ರವು ರೈತರು ಮತ್ತು ಜನಸಾಮಾನ್ಯರ ಹಿತವನ್ನು ಕಡೆಗಣಿಸಿ ನೀತಿಗಳನ್ನು ಜಾರಿಗೊಳಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು