ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ಗ್ರಂಥಾಲಯಗಳಿಗೆ ಸೌಲಭ್ಯ ಕೊರತೆ

12 ಗ್ರಂಥಾಲಯಗಳಿಗೆ ಸ್ವಂತ ಕಟ್ಟಡವಿಲ್ಲ
Last Updated 6 ನವೆಂಬರ್ 2020, 3:24 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿರುವ ಹಲವು ಗ್ರಂಥಾಲಯ ಗಳು ಸ್ವಂತ ಕಟ್ಟಡ ಸೌಲಭ್ಯದಿಂದ ವಂಚಿತಗೊಂಡಿವೆ.

ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಂಥಾಲಯ ಮಂಜೂರಾಗಿವೆ. ಗ್ರಂಥಾಲಯ ನಿರ್ವಹಣೆಯ ಜವಾಬ್ದಾರಿಯನ್ನು ಈಗ ಗ್ರಂಥಾಲಯ ಇಲಾಖೆಯಿಂದ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದೆ.

ಎಲ್ಲಾ ಗ್ರಂಥಾಲಯಗಳಿಗೆ ಗ್ರಂಥಪಾಲಕರನ್ನು ನೇಮಕ ಮಾಡಲಾಗಿದೆ. ಒಟ್ಟು 28 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿದ್ದು 12 ಗ್ರಂಥಾಲಯಗಳಿಗೆ ಸ್ವಂತ ಕಟ್ಟಡವಿಲ್ಲ. ಸ್ವಂತ ಕಟ್ಟಡ ಹೊಂದಿರದ ಗ್ರಂಥಾಲಯಗಳ ವ್ಯವಸ್ಥೆಯನ್ನು ಆಯಾ ಗ್ರಾಮ ಪಂಚಾಯಿತಿ ಕಚೇರಿ ಅಥವಾ ಗ್ರಾಮದ ಇತರೇ ಸರ್ಕಾರಿ ಕಟ್ಟಡಗಳಲ್ಲಿ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿಗಳು ಸರ್ಕಾರಿ ನಿವೇಶನ ಗುರುತಿಸಿ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಇದೆ.

ತಾಲ್ಲೂಕಿನ ಮದ್ಲಾಪುರ ಗ್ರಾಮದಲ್ಲಿ ಗ್ರಂಥಾಲಯ ಎರಡು ದಶಕಗಳಿಂದ ಗ್ರಾಮ ಸೇವಕರ ಕಚೇರಿ ಕಟ್ಟಡದಲ್ಲಿ ಇದೆ. ಈಗ ಈ ಕಟ್ಟಡವು ಶಿಥಿಲಗೊಂಡಿದ್ದು ಮಳೆ ಬಂದಾಗ ಸೋರುತ್ತದೆ. ಕಟ್ಟಡದ ಮೇಲ್ಛಾವಣಿ ಕುಸಿಯುವ ಸ್ಥಿತಿಯಲ್ಲಿದೆ. ಕಾರಣ ಗ್ರಂಥಾಲಯದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಗ್ರಾಮಸ್ಥರು ಈಚೆಗೆ ಧರಣಿ ನಡೆಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಗ್ರಂಥಾಲಯ ಕಟ್ಟಡಗಳನ್ನು ನಿರ್ಮಿಸಬೇಕು. ಗ್ರಾಮೀಣ ಗ್ರಂಥಾಲಯಗಳಲ್ಲಿ ಕೇವಲ ಎರಡು ದಿನಪತ್ರಿಕೆಗಳ ಖರೀದಿಗೆ ಅವಕಾಶ ಇದೆ. ಎಲ್ಲಾ ದಿನ ಪತ್ರಿಕೆಗಳು, ನಿಯತಕಾಲಿಕೆಗಳು, ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪೂರೈಕೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

****

ಗ್ರಾಮೀಣ ಗ್ರಂಥಾಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯಿತಿ ವತಿಯಿಂದ ಕೆಕೆಆರ್‌ಡಿಬಿಗೆ ಪ್ರಸ್ತಾವ ಸಲ್ಲಿಸಲಾಗಿದೆ.
-ಎಂ.ಎಸ್.ರೆಬಿನಾಳ
ಜಿಲ್ಲಾ ಗ್ರಂಥಾಲಯ ಅಧಿಕಾರಿ

****
ಮದ್ಲಾಪುರ ಸೇರಿದಂತೆ ವಿವಿಧ ಗ್ರಾಮೀಣ ಗ್ರಂಥಾಲಯಗಳಿಗೆ ಸ್ವಂತ ಕಟ್ಟಡ ನಿರ್ಮಿಸಬೇಕು.
ಶರಣಬಸವ ಮದ್ಲಾಪುರ,
ಉಪನ್ಯಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT