ಬುಧವಾರ, ನವೆಂಬರ್ 20, 2019
27 °C

ವಿಚಾರಣೆ ವೇಳೆ ಯುವಕ ಸಾವು ಪ್ರಕರಣ ದಾಖಲು

Published:
Updated:

ರಾಯಚೂರು: ದೇವದುರ್ಗ ತಾಲ್ಲೂಕು ಗಬ್ಬೂರಿನಲ್ಲಿ ಪೊಲೀಸರು ವಿಚಾರಣೆ ನಡೆಸುವ ವೇಳೆ ಯುವಕ ಶಿವಕುಮಾರ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಅದೇ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಮುದ್ದುರಂಗ
ಸ್ವಾಮಿ, ಕಾನ್‌ಸ್ಟೆಬಲ್‌ಗಳಾದ ಬಾಲಪ್ಪ, ಪಂಚಮುಖಿ ಹಾಗೂ ಹೋಂಗಾರ್ಡ್‌ ಹನುಮಗೌಡ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ.

‘ಅಸಹಜ ಸಾವು ಪ್ರಕರಣ ದಾಖಲಾಗಿದೆ. ಕಾನೂನು ಪ್ರಕಾರ ತನಿಖೆ ನಡೆಸಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಪಿಎಸ್‌ಐ ಸೇರಿ ನಾಲ್ವರನ್ನೂ ಭಾನುವಾರವೇ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪ್ರತಿಕ್ರಿಯಿಸಿ (+)