ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಪರಿಹಾರ ನೀಡುವ ಕ್ರಮಕ್ಕೆ ಸೂಚನೆ

Last Updated 20 ಜೂನ್ 2020, 15:58 IST
ಅಕ್ಷರ ಗಾತ್ರ

ರಾಯಚೂರು: ಮುನಿರಾಬಾದ್-ಮೆಹಬೂಬನಗರ ರೈಲು ಮಾರ್ಗ ನಿರ್ಮಾಣಕ್ಕೆ ಸಿಂಧನೂರು ತಾಲ್ಲೂಕಿನ 196 ಎಕರೆ ಜಮೀನನ್ನು ಈಗಾಗಲೇ ಭೂಸ್ವಾಧಿನ ಪಡಿಸಿಕೊಳ್ಳಲಾಗಿದೆ. ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಪ್ರತಿ ಎಕರೆಗೆ ದರ ನಿಗದಿಪಡಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಸಿಂಧನೂರಿನ ವಿಶೇಷ ಭೂಸ್ವಾಧಿನಾಧಿಕಾರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಭೂಸ್ವಾಧೀನ ಪಡಿಸಿಕೊಳ್ಳುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈಲು ಮಾರ್ಗ ನಿರ್ಮಾಣಕ್ಕಾಗಿ ಸಿಂಧನೂರು ತಾಲ್ಲೂಕಿನ ರೈತರು ಈಗಾಗಲೇ ಭೂಮಿ ಹಸ್ತಾಂತರಿಸಿದ್ದಾರೆ. ಸಾಧ್ಯವಾದಷ್ಟು ಬೇಗ ಅವರಿಗೆ ಪರಿಹಾರ ಮೊತ್ತ ಪಾವತಿಸಬೇಕು. ಸಿಂಧನೂರು ತಾಲ್ಲೂಕಿನ ಸಿಂಧನೂರು ನಗರದಿಂದ ರಾಗಲಪರ್ವಿವರೆಗೆ ಇದೇ ರೈಲು ಮಾರ್ಗಕ್ಕಾಗಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಿದೆ. ಪೋತನಾಳ್ - ಕಲ್ಲೂರು ಮಾರ್ಗ ಒಟ್ಟಾರೆ 877 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಿ, ಜಂಟಿ ಮೋಜಣಿ ಪ್ರಮಾಣಪತ್ರ (ಜೆಂಎಸಿ) ತಯಾರಿಸಿ ಸಲ್ಲಿಸುವಂತೆ ಅವರು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮೊಹಮ್ಮದ್ ಇರ್ಫಾನ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ರೋಣಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸುಬ್ರಮಣ್ಯ, ಸಿಂಧನೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯ ಪ್ರೇಮಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT